ವಿಧಾನಸಭೆ ಚುನಾವಣೆ: ಮೇಲುಕೋಟೆಯಲ್ಲಿ ದರ್ಶನ್ ಪುಟ್ಟಣ್ಣಯ್ಯಗೆ ಕಾಂಗ್ರೆಸ್ ಬೆಂಬಲ?
ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ದಿವಂಗತ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಅವರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ.

ಮಂಡ್ಯ: ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ದಿವಂಗತ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಅವರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಂಡ್ಯದ ಕಾಂಗ್ರೆಸ್ ಮುಖಂಡರಾದ ಪಿ.ಎಂ.ನರೇಂದ್ರಸ್ವಾಮಿ ಮತ್ತು ಎನ್.ಚೆಲುವರಾಯಸ್ವಾಮಿ ಅವರೊಂದಿಗೆ ಸೋಮವಾರ ಪಕ್ಷದ ಕಚೇರಿಯಲ್ಲಿ ದರ್ಶನ್ ಅವರೊಂದಿಗೆ ಸಮಾಲೋಚನೆ ನಡೆಸಿದರು.
ಸಭೆ ಫಲಪ್ರದವಾಗಿದ್ದು, ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ದರ್ಶನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆತಿಳಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ವಿರುದ್ಧ ಕಾಂಗ್ರೆಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ದರ್ಶನ್ ಆಗ ಸ್ವರಾಜ್ ಇಂಡಿಯಾ ಟಿಕೆಟ್‌ನಲ್ಲಿ ಸ್ಪರ್ಧಿಸಿ ಜೆಡಿಎಸ್‌ನ ಸಿಎಸ್ ಪುಟ್ಟರಾಜು ವಿರುದ್ಧ 23,000 ಮತಗಳ ಅಲ್ಪ ಅಂತರದಿಂದ ಸೋತಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


