ಜೆಡಿಎಸ್ ಶಾಸಕ ಗೌರಿಶಂಕರ್ ಗೆ ರಿಲೀಫ್: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹತೆ ತೀರ್ಪಿಗೆ ಮಧ್ಯಂತರ ತಡೆ!
ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.

ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಗೌರಿಶಂಕರ್ ಅವರನ್ನು ಹೈಕೋರ್ಟ್ ಏಕಸದಸ್ಯ ಪೀಠ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ಶಾಸಕ ಗೌರಿಶಂಕರ್ ಪರ ವಕೀಲರು ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ಒಂದು ತಿಂಗಳ ಕಾಲ ಆದೇಶಕ್ಕೆ ತಡೆ ನೀಡಿದೆ.
ಹೈಕೋರ್ಟ್ ನೀಡಿದ ಒಂದು ತಿಂಗಳ ಅವಧಿಯಲ್ಲಿ ಗೌರಿಶಂಕರ್ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಈಗ ಹೈಕೋರ್ಟ್ ನೀಡಿರುವ ತೀರ್ಪಿಗೆ ತಡೆ ಪಡೆಯಬೇಕು. ತಡೆ ಪಡೆದರೆ ಮಾತ್ರ ಹಾಲಿ ಶಾಸಕರು ಸೇಫ್ ಆಗುತ್ತಾರೆ. ಇಲ್ಲವಾದರೆ ಅನರ್ಹ ಭೀತಿ ಎದುರಾಗುತ್ತದೆ.
ಗೌರಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್ ಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸುರೇಶ್ ಗೌಡರ ಪರ ಹಿರಿಯ ವಕೀಲೆ ನಳಿನಾ ಮಾಯೇಗೌಡ ಸುದೀರ್ಘ ವಾದ ಮಂಡಿಸಿದ್ದರು. ತೀರ್ಪು ಹೊರಬೀಳುತ್ತಲೇ, ಗೌರಿಶಂಕರ್ ಪರ ವಕೀಲ ಆರ್. ಹೇಮಂತ ರಾಜ್, ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ತೀರ್ಪಿಗೆ ತಡೆ ನೀಡಬೇಕು" ಎಂದು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಿದರು.
ಈ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠ, 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಆಯ್ಕೆಯನ್ನು ಹೈಕೋರ್ಟ್ ಅನೂರ್ಜಿತಗೊಳಿರುವ ಕಾರಣ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಗೌರಿಶಂಕರ್ ಅವರನ್ನು ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹಗೊಳಿಸಬಹುದು. ಹಾಗಾಗಿ, ಈಗ ಗೌರಿಶಂಕರ್ ಮುಂದಿರುವ ಆಯ್ಕೆ ಎಂದರೆ 30 ದಿನಗಳ ಒಳಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಬೇಕು. ಅಲ್ಲಿ ಹೈಕೋರ್ಟ್ ತೀರ್ಪಿಗೆ ತಡೆ ಪಡೆದರೆ ಮಾತ್ರ ಗೌರಿಶಂಕರ್ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ" ಎಂಬುದು ಕಾನೂನು ತಜ್ಞರ ಅಭಿಮತವಾಗಿದೆ.
2018ರ ಚುನಾವಣೆ ಸಂದರ್ಭ ಡಿ.ಸಿ ಗೌರಿಶಂಕರ್ ಅವರು 32 ಸಾವಿರ ವಯಸ್ಕರು ಹಾಗೂ 16 ಸಾವಿರ ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಬಿಜೆಪಿಯ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಅವರು, ನಕಲಿ ಬಾಂಡ್ ಆಮಿಷ ಒಡ್ಡಿ ಗೌರಿಶಂಕರ್ ಅಕ್ರಮವಾಗಿ ಚುನಾವಣೆಯನ್ನು ಗೆದ್ದಿದ್ದಾರೆ. ಆದ್ದರಿಂದ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಮನವಿ ಮಾಡಿದ್ದರು.
ಸುದೀರ್ಘ 5 ವರ್ಷಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ಶಾಸಕ ಡಿ.ಸಿ.ಗೌರಿಶಂಕರ್ ಅವರನ್ನು ಆರು ವರ್ಷ ಅನರ್ಹಗೊಳಿಸಿ ತೀರ್ಪು ನೀಡಿದೆ. ಈ ಅರ್ಜಿಯನ್ನು ಸುದೀರ್ಘವಾಗಿ ವಾದ–ಪ್ರತಿವಾದ ಆಲಿಸಿ, ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿರುವ ನ್ಯಾಯಮೂರ್ತಿ ಎಸ್ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು ಆದೇಶ ಕಾಯ್ದಿರಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


