ಶಿವಮೊಗ್ಗದಲ್ಲಿ ಅಮಿತ್ ಶಾ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ
ದಕ್ಷಿಣದ ಹೆಬ್ಬಾಗಿಲು ಎಂದೇ ಕರೆಯಲಾಗುವ ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಬಿಜೆಪಿ ರಣತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತದಾರರ ಮನಗೆಲಲ್ಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.

ಶಿವಮೊಗ್ಗ: ರಾಜಕಾರಣದಲ್ಲಿ ಬಿಜೆಪಿಗೆ ದಕ್ಷಿಣದ ಹೆಬ್ಬಾಗಿಲು ಎಂದೇ ಕರೆಯಲಾಗುವ ಕರ್ನಾಟಕದಲ್ಲಿ ಅಧಿಕಾರವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಪಕ್ಷ ರಣತಂತ್ರ ರೂಪಿಸುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಚಾಣಕ್ಯ ಖ್ಯಾತಿಯ ಅಮಿತ್ ಶಾ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಮತದಾರರ ಮನಗೆಲಲ್ಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ರಾಜ್ಯದ ಎಲ್ಲಾ ದಿಕ್ಕಿನಲ್ಲಿಯೂ ರೋಡ್ ಶೋ, ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತದಾರರನ್ನು ಓಲೈಸಲು ಮುಂದಾಗಿದ್ದಾರೆ. ಅದರಲ್ಲೂ ಕೋಮು ಸೂಕ್ಷ್ಮ ಪ್ರದೇಶವಾದ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ಸೋಮವಾರ ಬೃಹತ್ ರೋಡ್ ಶೋ ನಡೆಸುತ್ತಿದ್ದು, ಜನಸಾಗರವೇ ಹರಿದುಬಂದಿದೆ. ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ತುಂಬಿರುವ ಜನರು, ಮೋದಿ, ಅಮಿತ್ ಶಾ, ಬಿಜೆಪಿ ಪರ ಜಯ ಘೋಷ ಮೊಳಗಿಸಿದರು.
ಶಿವಪ್ಪ ನಾಯಕ ಪುತ್ಹಳಿಗೆ ನಮನ ಸಲ್ಲಿಸಿ ರೋಡ್ ಶೋ ಆರಂಭಿಸಿದ ಅಮಿತ್ ಶಾ ಅವರಿಗೆ ಸಂಸದ ಬಿವೈ ರಾಘವೇಂದ್ರ, ಬಿಜೆಪಿ ಹಿರಿಯ ಮುಖಂಡ ಕೆ.ಎಸ್. ಈಶ್ವರಪ್ಪ, ಪಕ್ಷದ ಅಭ್ಯರ್ಥಿಗಳಾದ ಚೆನ್ನಬಸಪ್ಪ, ಅಶೋಕ್ ನಾಯ್ಕ್ ಸಾಥ್ ನೀಡಿದರು. ಕಲಾತಂಡಗಳ ಆಕರ್ಷಕ ಪ್ರದರ್ಶನ ರೋಡ್ ಶೋ ಮೆರುಗು ಹೆಚ್ಚಿಸಿದೆ.
ಇದಕ್ಕೂ ಮುನ್ನಾ ಹಾವೇರಿಯ ರಾಣೆಬೆನ್ನೂರು, ತುಮಕೂರಿನ ಗುಬ್ಬಿ ಹಾಗೂ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಮಿತ್ ಶಾ ರೋಡ್ ಶೋ ನಡೆಸುವ ಮೂಲಕ ಪ್ರಚಾರ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


