ರಾಜಕೀಯ

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ: ಜಗದೀಶ್‌ ಶೆಟ್ಟರ್

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ: ಜಗದೀಶ್‌ ಶೆಟ್ಟರ್
ಜಗದೀಶ್ ಶೆಟ್ಟರ್
Published On :

ಕೊಪ್ಪಳ: ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ರಾಜಕಾರಣ ಜನರ ಪ್ರೀತಿ ನನಗೆ ಗೊತ್ತಿದೆ ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ್‌ ಅವರು ಸೋಮವಾರ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಅವರ ಕ್ಷೇತ್ರದಲ್ಲೇ ಸೋಲಿಸಲೇಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಜಗದೀಶ್‌ ಶೆಟ್ಟರ್‌ ಅವರು, ನನ್ನನ್ನು ಸೋಲಿಸಲು ಇದು ಗುಜರಾತ್‌ ಅಲ್ಲ. ಇಲ್ಲಿನ ಜನ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತು. ಈ ಬಾರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದಾರೆ. 

ಕೊಪ್ಪಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ್ ಅವರ ಪರ ಪ್ರಚಾರಕ್ಕೆ ಆಗಮಿಸಿದ್ದ ಜಗದೀಶ್ ಶೆಟ್ಟರ್ ಅವರು, ಬಿಜೆಪಿಯಿಂದ ನನ್ನನ್ನು ಹೊರಗೆ ಹಾಕಿದರು ಎಂಬ ಕಾರಣಕ್ಕೆ ಜನರಲ್ಲಿ ಅನುಕಂಪವಿದೆ. ಈಗ ರಾಜ್ಯದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಮತಗಳ ಅಂತರದಿಂದ ನಾನು ಗೆಲುವು ಸಾಧಿಸಲಿದ್ದೇನೆ ಎಂದರು.

ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್, ಈಗಾಗಲೇ ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷ ಏನೂ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.