ಖರ್ಗೆ ತವರಿನಲ್ಲಿ ಮೋದಿ ಭರ್ಜರಿ ರೋಡ್ ಶೋ, ಜನರಿಂದ ಅದ್ದೂರಿ ಸ್ವಾಗತ- ವಿಡಿಯೋ
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು.

ಕಲಬುರಗಿ: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮಿಂಚಿನ ಸಂಚಲನ ನೃಷ್ಟಿಸಿದರು.
ಹುಮನಾಬಾದ ರಸ್ತೆಯಲ್ಲಿರುವ ಕೆಎಂಎಫ್ ಡೈರಿ ಸರ್ಕಲ್ನಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದವರೆಗೆ ಸುಮಾರು 5 ಕಿಮೀಗಳಷ್ಟು ದೂರ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ನೆಚ್ಚಿನ ಪ್ರಧಾನಿಯನ್ನು ಕಣ್ತುಂಬಿಕೊಳ್ಳಲು ರಸ್ತೆಯ ಇಕ್ಕೆಲಗಳಲ್ಲಿ ಕಿಕ್ಕಿರಿದು ಜನರು ಸೇರಿದ್ದರು.
ರಸ್ತೆಯುದ್ದಕ್ಕೂ ನೆರದಿದ್ದ ಸಾವಿರಾರು ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಹೂಮಳೆಗರೆದು, ಜಯಘೋಷ ಮೊಳಗಿಸಿದರು. ಎಂದು ಘೋಷಣೆ ಕೂಗಿದರು. ಪುಟ್ಟ ಮಕ್ಕಳು ರಾಮ, ಲಕ್ಷ್ಮಣ, ಒನಕೆ ಓಬವ್ವ ವೇಷ ಧರಿಸಿ ಬರುವ ಮೂಲಕ ರೋಡ್ ಶೋ ವೇಳೆ ಗಮನ ಸೆಳೆದಿದ್ದಾರೆ.
ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆಯಲ್ಲಿ ಇಡೀ ನಗರ ಸಂಪೂರ್ಣ ಕೇಸರಿಮಯವಾಗಿತ್ತು. ಮೋದಿ ರೋಡ್ ಶೋಗೆ ಪೊಲೀಸ್ ಹಾಗೂ ಸೇನಾ ಪಡೆಗಳಿಂದ ಸರ್ಪಗಾವಲು ಹಾಕಲಾಗಿದ್ದು, ಬಿಗಿ ಭದ್ರತೆ ಒದಗಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


