ವಿಜಯಪುರ: ಸೋಲಿನ ಭಯದಿಂದ ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ಜೆಡಿಎಸ್ ಅಭ್ಯರ್ಥಿ
ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರನ್ನು ಬೆಂಬಲಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.

ವಿಜಯಪುರ: ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಾಬರಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಿಫ್ ಅವರನ್ನು ಬೆಂಬಲಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.
ಜೆಡಿಎಸ್ ಅಭ್ಯರ್ಥಿಯ ಈ ನಿರ್ಧಾರದಿಂದ ಗ್ರ್ಯಾಂಡ್ ಓಲ್ಡ್ ಪಾರ್ಟಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ. 'ನಗರದಲ್ಲಿ ಜೆಡಿಎಸ್ ದುರ್ಬಲವಾಗಿರುವ ಕಾರಣ ನನ್ನ ಸಮುದಾಯದ ಮುಖಂಡರ ಜತೆ ಮಾತುಕತೆ ನಡೆಸಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದೇನೆ ಎಂದು ಮಹಾಬರಿ ಹೇಳಿದ್ದಾರೆ.
ಈ ಹಿಂದೆ ಕಾರ್ಯಕರ್ತರ ಕೊರತೆಯಿಂದ ಪಕ್ಷ ದಯನೀಯವಾಗಿ ಸೋತಿದ್ದು, ಮತ್ತೆ ಸ್ಪರ್ಧಿಸುವುದರಲ್ಲಿ ಅರ್ಥವಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಜಾತ್ಯತೀತ ಪಕ್ಷಗಳಾಗಿರುವುದರಿಂದ ಕಾಂಗ್ರೆಸ್ಗೆ ಬೆಂಬಲ ನೀಡಲು ನಿರ್ಧರಿಸಿದ್ದೇನೆ. ನನ್ನ ವಿರುದ್ಧ ಜೆಡಿಎಸ್ ಯಾವುದೇ ಶಿಸ್ತು ಕ್ರಮ ತೆಗೆದುಕೊಂಡರೂ ಅದನ್ನು ಎದುರಿಸಲು ಸಿದ್ಧ ಎಂದು ತಿಳಿಸಿದ್ದಾರೆ.
ನಾಮಪತ್ರ ಸಲ್ಲಿಸುವ ಮುನ್ನ ಈ ಅಂಶಗಳನ್ನು ಅರಿತುಕೊಳ್ಳಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿದ ಮಹಾಬರಿ, ನನಗೆ ಜನರ ನಾಡಿಮಿಡಿತ ಗೊತ್ತಾಗಿರಲಿಲ್ಲ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯೇ ಜೆಡಿಎಸ್ ದುರ್ಬಲವಾಗಿರುವ ಕಡೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಹೇಳಿರುವುದಾಗಿ ವಿವರಿಸಿದ್ದಾರೆ.
ಮಹಾಬರಿ 2013ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಮತ್ತೊಂದು ಅಸೆಂಬ್ಲಿ ಚುನಾವಣೆಯಲ್ಲಿ ಬಿಎಸ್ಪಿಯಿಂದ ಸ್ಪರ್ಧಿಸಿ ಸೋತಿದ್ದರು. ನಂತರ ಸ್ವಲ್ಪ ದಿನ ರಾಜಕೀಯದಿಂದ ದೂರವಿದ್ದರು. ಬಳಿಕ ಕಾಂಗ್ರೆಸ್ ಸೇರಿ ಹದಿನೈದು ದಿನಗಳಲ್ಲೇ ಪಕ್ಷ ತೊರೆದು ಮತ್ತೆ ಜೆಡಿಎಸ್ ಸೇರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


