ಪ್ರಧಾನಿ ಮೋದಿ, ಕೆಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರಧಾನಿ ನರೇಂದ್ರ ಮೋದಿ ಮತ ಕೇಳಲು ಹಿಂದೂ ದೇವರುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ. ರೋಡ್ ಶೋ ಮೂಲಕ ಜನರಿಗೆ ಅನಾನುಕೂಲತೆ ಉಂಟು ಮಾಡುತ್ತಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ಈಗಾಗಲೇ ಮಾರ್ಗಸೂತ್ರ ಹೊರಡಿಸಿರುವುದಾಗಿ ಕಾಂಗ್ರೆಸ್ ಕಾನೂನು ಘಟಕದ ಎಸ್ ಎ ಅಹ್ಮದ್ ಹೇಳಿದರು.
ಇನ್ನೊಂದೆಡೆ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


