ವಿಧಾನಸಭೆ ಚುನಾವಣೆ: ಮೇ 8ರಂದು ಬಹಿರಂಗ ಪ್ರಚಾರಕ್ಕೆ ತೆರೆ, ಮತದಾರರನ್ನು ಓಲೈಸಲು ಪಕ್ಷಗಳಿಂದ ಕಸರತ್ತು
ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವಾರವಷ್ಟೇ ಉಳಿದಿದ್ದು, ಸೋಮವಾರದಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಮುನ್ನವೇ ಮತದಾರರನ್ನು ಸೆಳೆಯಲು ರಾಜ್ಯದ ರಾಜಕೀಯ ಪಕ್ಷಗಳು ಕೊನೆಯ ಹಂತದ ಪ್ರಯತ್ನಗಳನ್ನು ನಡೆಸುತ್ತಿವೆ.

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಒಂದು ವಾರವಷ್ಟೇ ಉಳಿದಿದ್ದು, ಸೋಮವಾರದಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಮುನ್ನವೇ ಮತದಾರರನ್ನು ಸೆಳೆಯಲು ರಾಜ್ಯದ ರಾಜಕೀಯ ಪಕ್ಷಗಳು ಕೊನೆಯ ಹಂತದ ಪ್ರಯತ್ನಗಳನ್ನು ನಡೆಸುತ್ತಿವೆ.
ಚುನಾವಣಾ ಪ್ರಚಾರದ ಅಂತಿಮ ಹಂತದಲ್ಲಿ, ಪ್ರಧಾನಿ ನರೇಂದ್ರ ಮೋದಿ 20 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ 25 ರಲ್ಲಿ ಪಾಲ್ಗೊಳ್ಳಲಿದ್ದಾರೆ. ಶಾ ಅವರು ರಾಜ್ಯದಾದ್ಯಂತ ಪಕ್ಷದ ನಾಯಕರ ಸರಣಿ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು 28 ಸಾರ್ವಜನಿಕ ಸಭೆಗಳ ನೇತೃತ್ವ ವಹಿಸಲಿದ್ದು, ಡಿಕೆ ಶಿವಕುಮಾರ್ 19 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜೆಡಿಎಸ್‌ನ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜ್ಯದಾದ್ಯಂತ 50 ರಿಂದ 60 ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು 10 ರಿಂದ 15 ರ‍್ಯಾಲಿಗಳು, ಸಾರ್ವಜನಿಕ ಸಂವಾದ ಮತ್ತು ರೋಡ್‌ಶೋಗಳಲ್ಲಿ ಭಾಗವಹಿಸಲಿದ್ದಾರೆ.
ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಗಾ ರೋಡ್‌ಶೋವನ್ನು ಯೋಜಿಸಿದೆ ಮತ್ತು ಪ್ರಧಾನಿ ಮೋದಿಯವರ ಪ್ರಭಾವವನ್ನು ಎದುರಿಸಲು ಕಾಂಗ್ರೆಸ್ ಕೂಡ ಬೃಹತ್ ರೋಡ್‌ಶೋ ಅನ್ನು ಆಯೋಜಿಸುತ್ತಿದೆ.
ತಮ್ಮ ಪುತ್ರ ಸ್ಪರ್ಧಿಸಿರುವ ಚನ್ನಪಟ್ಟಣ ಹಾಗೂ ರಾಮನಗರಕ್ಕೆ ಇನ್ನೂ ಭೇಟಿ ನೀಡದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೆಗಾ ಕಾರ್ಯಕ್ರಮಗಳ ಮೂಲಕ ಅದನ್ನು ಸರಿದೂಗಿಸಿಕೊಳ್ಳಲಿದ್ದಾರೆ.
ಶುಕ್ರವಾರದಿಂದ ಪ್ರಧಾನಿ ಮೋದಿ ಅವರು ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೊಕ್ಕಾಂ ಹೂಡಲಿದ್ದು, ಅಂತಿಮ ಸುತ್ತಿನ ಪ್ರಚಾರ ಕೈಗೊಳ್ಳಲಿದ್ದಾರೆ. ಶುಕ್ರವಾರ ಉತ್ತರ ಕರ್ನಾಟಕದ ಬಳ್ಳಾರಿ, ದಕ್ಷಿಣ ಕರ್ನಾಟಕದ ತುಮಕೂರಿನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಉತ್ತರ ಕರ್ನಾಟಕದ ಬಾದಾಮಿ, ಹಾವೇರಿ, ಶಿವಮೊಗ್ಗ ಮತ್ತು ದಕ್ಷಿಣ ಭಾಗದ ನಂಜನಗೂಡು (ಮೈಸೂರು) ನಲ್ಲಿ ನಾಲ್ಕು ಸಾರ್ವಜನಿಕ ರ‍್ಯಾಲಿಗಳನ್ನು ನಡೆಸಲಿದ್ದಾರೆ.
ಪ್ರಧಾನಿ ಶನಿವಾರ ಬೃಹತ್ ರೋಡ್ ಶೋ ನಡೆಸಲಿದ್ದಾರೆ. 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಯಲಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ. 'ನಮ್ಮ ಕರ್ನಾಟಕ ಯಾತ್ರೆ' ರೋಡ್ ಶೋ 36.6 ಕಿಲೋಮೀಟರ್‌ಗಳ ಮೂಲಕ ಸಾಗಲಿದೆ. ಬೆಳಗ್ಗೆ 11 ಗಂಟೆಯಿಂದ ಮತ್ತು ರಾತ್ರಿ 10 ಗಂಟೆಗಳೊಳಗೆ ನಡೆಯಲಿದೆ.
ಕಾಂಗ್ರೆಸ್ ಮೇ 7 ರಂದು ರಾಹುಲ್ ಗಾಂಧಿಯವರಿಂದ ಬೃಹತ್ ರೋಡ್‌ಶೋವನ್ನು ಯೋಜಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


