ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಹಾ ಸಿಎಂ ಏಕನಾಥ್ ಶಿಂಧೆ ಪ್ರಚಾರ
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.
ಮಹಾ ಸಿಎಂ ಶಿಂಧೆ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು, ಕಾಪು ಮತ್ತು ಉಡುಪಿ ಪಟ್ಟಣದಲ್ಲಿ ಎರಡು ರೋಡ್ ಶೋಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಉಡುಪಿ ತಲುಪುವ ಮುನ್ನ ಶಿಂಧೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಉಡುಪಿಯ ಶ್ರೀಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ ಮಹಾರಾಷ್ಟ್ರಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


