ನೀಟ್ ಪರೀಕ್ಷೆ ದಿನದಂದು ಮೋದಿ ರೋಡ್‌ಶೋ ಬೇಜವಾಬ್ದಾರಿತನದ ಪರಮಾವಧಿ: ಸಿದ್ದರಾಮಯ್ಯ
ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯ ಅವರ ರೋಡ್ ಶೋನಿಂದ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನಾನುಕೂಲವಾಗುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ,...

ಮೈಸೂರು: ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯ ಅವರ ರೋಡ್ ಶೋನಿಂದ ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಅನಾನುಕೂಲವಾಗುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಪ್ರಧಾನಿಯವರು ಸಾವಿರಾರು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಶನಿವಾರ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನೀಟ್ ಆಕಾಂಕ್ಷಿಗಳು ಮತ್ತು ಬೆಂಗಳೂರಿನ ನಾಗರಿಕರ ವಿರೋಧದ ನಡುವೆಯೂ ಪ್ರಧಾನಿ ಮೋದಿ ರಾಜಧಾನಿಯಲ್ಲಿ ರೋಡ್‌ಶೋ ಮಾಡಿರುವುದು ಬೇಜವಾಬ್ದಾರಿತನದ ಪರಮಾವಧಿ ಎಂದು ಟೀಕಿಸಿದ್ದಾರೆ.
“ವಿಶೇಷವಾಗಿ ಇತರ ಗ್ರಾಮಗಳು ಮತ್ತು ದೂರದ ಸ್ಥಳಗಳಿಂದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಹೇಗೆ ತಲುಪುತ್ತಾರೆ. ನೀಟ್ ಪರೀಕ್ಷೆಯ ದಿನದಂದು ಬಿಜೆಪಿ ನಾಯಕರು ರೋಡ್‌ಶೋಗೆ ಬೆಂಬಲ ನೀಡಬಾರದಿತ್ತು ” ಎಂದು ಮಾಜಿ ಸಿಎಂ ಹೇಳಿದ್ದಾರೆ.
ಈ ಬಾರಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ, ರಾಜ್ಯಾದ್ಯಂತ ಬಿಜೆಪಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದು, ಸರಿಯಾದ ರಾಜಕೀಯ ಸ್ಥಿರತೆ ಇಲ್ಲದ ಕಾರಣ ರಾಜ್ಯದ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


