ನಿವೃತ್ತಿಯಾಗಲ್ಲ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ
ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ, ಆದರೆ, ಮುಂಬರುವ ಚುನಾವಣೆಯಲ್ಲಿ ಸ್ಪರ್ಧೆಗಿಳಿಯವುದಿಲ್ಲ ಎಂದು ಮಾಜಿ ಮುಖ್ಯಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರು ತಮ್ಮ ಮತಹಕ್ಕು ಚಲಾಯಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡುವ ಪಕ್ಷಕ್ಕೆ ಮತ ನೀಡುವಂತೆ ಮತದಾರರಲ್ಲಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ರಾಷ್ಟ್ರದ ಭವಿಷ್ಯ ಈ ಚುನಾವಣೆಯಲ್ಲಿ ಅಡಗಿದೆ. ಈ ಬಾರಿ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ವಿಶ್ವಾಸವಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಸಂಖ್ಯೆ 150ಕ್ಕೆ ಹೋದರೂ ಹೋಗಬಹುದು ಎಂದು ಹೇಳಿದರು.
ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶೇ.60ಕ್ಕೂ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸ ನನಗಿದೆ. ಕಾಂಗ್ರೆಸ್ ಸ್ವಂತ ಬಲದಿಂದ ಸರ್ಕಾರ ರಚಿಸಲಿದೆ. ರಾಜಕೀಯದಿಂದ ನಾನು ನಿವೃತ್ತಿಯಾಗುವುದಿಲ್ಲ. ಆದರೆ, ಮುಂಬರವ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಇದು ನನ್ನ ಕೊನೆಯ ಚುನಾವಣೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


