ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ: ಸಿದ್ದರಾಮಯ್ಯ
ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.

ಮೈಸೂರು: ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಆರೋಪಿಸಿದ್ದಾರೆ.
ಬೆಂಗಳೂರಿಗೆ ತೆರಳುವ ಮುನ್ನ ಮೈಸೂರಿನ ಶಾರದಾದೇವಿ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಮತ್ತು ಬಹುತೇಕ ಎಕ್ಸಿಟ್ ಪೋಲ್‌ಗಳು ಇದನ್ನೇ ಸೂಚಿಸುತ್ತಿವೆ ಎಂದು ಹೇಳಿದರು.
"ಜನರ ನಾಡಿಮಿಡಿತದ ಬಗ್ಗೆ ನನ್ನ ತಿಳುವಳಿಕೆ ನಿಜವಾಗಿದೆ. ನಾನು ನಿರೀಕ್ಷಿಸಿದಂತೆಯೇ ಫಲಿತಾಂಶಗಳು ಬರಲಿದೆ. ಕಾಂಗ್ರೆಸ್ 130 ರಿಂದ 150 ಸ್ಥಾನಗಳನ್ನು ಗೆಲ್ಲಲಿದೆ. ಕರಾವಳಿ ಭಾಗದಲ್ಲಿಯೂ ಕಾಂಗ್ರೆಸ್‌ನ ಸ್ಥಾನಗಳು ಹೆಚ್ಚಾಗಲಿವೆ ಎಂದು ತಿಳಿಸಿದರು.
ಹಳೆ ಮೈಸೂರಿನ ಕೆಲವೆಡೆ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದು, ಈ ಭಾಗದಲ್ಲಿ ಎಲ್ಲಿಯೂ ಬಿಜೆಪಿ ಜತೆ ನೇರ ಹಣಾಹಣಿ ಇಲ್ಲ. ವರುಣಾದಲ್ಲಿ ಸುಲಭವಾಗಿ ಗೆಲ್ಲುತ್ತೇನೆ, ಸೋಮಣ್ಣಗೆ ಇಲ್ಲಿನ ಜನರೇಕೆ ಮತ ಹಾಕುತ್ತಾರೆ? ವರುಣಾಗೆ ಅವರ ಕೊಡುಗೆ ಏನು? ವರುಣಾದಲ್ಲಿ ಬಿಜೆಪಿ ಜಾತಿ ರಾಜಕಾರಣ ಮತ್ತು ಹಣದ ರಾಜಕಾರಣ ಮಾಡಿದೆ. ವರುಣಾದಲ್ಲಿ ಜೆಡಿಎಸ್ ಬೆಂಬಲಿಗರು ಬಿಜೆಪಿಗೆ ಮತ ಹಾಕಿದ್ದಾರೆ, ಆದರೂ ನಾನು ಸುಲಭವಾಗಿ ಗೆಲ್ಲುತ್ತೇನೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ರಾಜಕಾರಣವೇ ಗೊತ್ತಿಲ್ಲ, ಅವರಿಗೆ ಗೊತ್ತಿರುವುದು ಬರೀ ದ್ವೇಷ ರಾಜಕಾರಣ: ಜಿ ಟಿ ದೇವೇಗೌಡ
ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕದಡುವ ಇಂತಹ ಸಂಘಟನೆಗಳನ್ನು ನಿಷೇಧಿಸಲು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದರಿಂದ ಬಜರಂಗದಳ ವಿಚಾರ ನನಗೆ ಸಮಸ್ಯೆಯೇ ಆಗುವುದಿಲ್ಲ ಎಂದರು.
ಲಿಂಗಾಯತ ನಾಯಕರೆಲ್ಲ ಭ್ರಷ್ಟರು ಎಂದು ಎಲ್ಲಿ ಹೇಳಿದ್ದೆ, ಸಿಎಂ ಬಸವರಾಜ ಬೊಮ್ಮಾಯಿ ಭ್ರಷ್ಟ ಎಂದು ಮಾತ್ರ ಹೇಳಿದ್ದೆ, ಅದನ್ನೂ ಬಿಜೆಪಿ ತಿರುಚಿ ನೆಗೆಟಿವ್ ಪ್ರಚಾರ ಮಾಡಿದೆ. ‘ಜನರು ಸ್ಪಷ್ಟ ಬಹುಮತ ನೀಡುತ್ತಿರುವಾಗ ಶಾಸಕರನ್ನು ರಕ್ಷಿಸಿಕೊಳ್ಳುವ ಪ್ರಶ್ನೆಯೇ ಬರುವುದಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


