ತನ್ನ ಶ್ರಮಕ್ಕೆ ಡಿಕೆ ಶಿವಕುಮಾರ್ ಕೂಲಿ ಕೇಳುತ್ತಿದ್ದಾರೆ: ಡಿಕೆ ಸುರೇಶ್
ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಹೇಳಿದ್ದಾರೆ.

ನವದೆಹಲಿ/ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗಬೇಕೆಂಬುದು ನನ್ನ ಆಸೆ ಎಂದು ಕಾಂಗ್ರೆಸ್ ಸಂಸದ ಡಿಕೆ.ಸುರೇಶ್ ಅವರು ಮಂಗಳವಾರ ಹೇಳಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕಷ್ಟ ಸಂದರ್ಭದಲ್ಲಿ ಕಾಂಗ್ರೆಸ್ ಡಿಕೆ.ಶಿವಕುಮಾರ್'ಗೆ ಜವಾಬ್ದಾರಿ ನೀಡಿತು. ಸೋನಿಯಾ ಗಾಂಧಿಯವರು ನಮಗೆ ಪಕ್ಷದ ಜವಾಬ್ದಾರಿ ನೀಡಿದ್ದರು. ನಿಮ್ಮ ಮೇಲೆ ನಂಬಿಕೆ, ವಿಶ್ವಾಸವಿದೆ ಎಂದು ಹೇಳಿದ್ದರು. ಕೊಟ್ಟ ಜವಾಬ್ದಾರಿಯನ್ನು ಡಿಕೆ.ಶಿವಕುಮಾರ್ ಅವರು ನಿಭಾಯಿಸಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು 135 ಸ್ಥಾನಗಳಲ್ಲಿ ಗೆಲ್ಲುವಂತೆ ಮಾಡಿದ್ದಾರೆ. ಹೀಗಾಗಿ ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಕೇಳುತ್ತಿದ್ದಾರೆಂದು ಹೇಳಿದರು.
ಹಿಂಸೆ, ಕಿರುಕುಳ, ಅವಮಾನ, ನಿಂದನೆಗಳನ್ನು ಡಿಕೆ.ಶಿವಕುಮಾರ್ ಎದುರಿಸಿದ್ದಾರೆ. ಎಲ್ಲಾ ಸವಾಲುಗಳನ್ನು ಎದುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿ.ಕೆ.ಶಿವಕುಮಾರ್ ಕೇಳುತ್ತಿದ್ದಾರೆ. ಮುಂದಿನ ನಿರ್ಧಾರ ಹೈಕಮಾಂಡ್ ಬಿಟ್ಟಿದ್ದು. ಇಂದು ಡಿಕೆಶಿ ದೆಹಲಿಗೆ ಆಗಮಿಸುತ್ತಿದ್ದು, ಎಐಸಿಸಿ ಅಧ್ಯಕ್ಷ ಹಾಗೂ ಇತರೆ ನಾಯಕರು ಕುಳಿತು ಚರ್ಚೆ ನಡೆಸಿ, ನಿರ್ಧಾರ ಕೈಗೊಳ್ಳುತ್ತಾರೆಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


