ರಾಜಕೀಯ

ಕೇಂದ್ರ ಸಚಿವ ಭಗವಂತ್ ಖೂಬಾ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು: ಪ್ರಭು ಚವ್ಹಾಣ್

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಔರಾದ್‌ನಿಂದ ಸ್ಪರ್ಧಿಸಿದ್ದ ನನ್ನನ್ನು ಸೋಲಿಸಲು ಕೇಂದ್ರದ ರಾಜ್ಯ ಸಚಿವ ಭಗವಂತ ಖೂಬಾ ಯತ್ನಿಸಿದ್ದಾರೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಹೇಳಿರುವ ವಿಡಿಯೋ ವೈರಲ್ ಆಗಿದೆ.

ಕೇಂದ್ರ ಸಚಿವ ಭಗವಂತ್ ಖೂಬಾ ನನ್ನನ್ನು ಸೋಲಿಸಲು ಪ್ರಯತ್ನಿಸಿದ್ದರು: ಪ್ರಭು ಚವ್ಹಾಣ್
ಪ್ರಭು ಚವ್ಹಾಣ್
Published On :

ಕಲಬುರಗಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆಯ ಔರಾದ್‌ನಿಂದ ಸ್ಪರ್ಧಿಸಿದ್ದ ನನ್ನನ್ನು ಸೋಲಿಸಲು  ಕೇಂದ್ರದ  ರಾಜ್ಯ ಸಚಿವ ಭಗವಂತ ಖೂಬಾ ಯತ್ನಿಸಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿಯ ನೂತನ ಶಾಸಕ ಪ್ರಭು ಚೌಹಾಣ್ ಹೇಳಿರುವ ವಿಡಿಯೋ ವೈರಲ್ ಆಗಿದೆ.

ಖೂಬಾ ತನ್ನ ವಿರುದ್ಧ ಪ್ರಚಾರ ಮಾಡಲು 300 ಜನರನ್ನು ಔರಾದ್‌ಗೆ ಕಳುಹಿಸಿದ್ದಾರೆ ಎಂದು ಚೌಹಾಣ್  ಅಳುತ್ತಾ ಹೇಳುವುದನ್ನು ವೀಡಿಯೊದಲ್ಲಿ ಕೇಳಬಹುದು. ಆದರೆ, ಔರಾದ್ ಜನರು ಆಶೀರ್ವಾದ ಮಾಡಿದ್ದರಿಂದ ಮತ್ತೊಮ್ಮೆ ಆಯ್ಕೆಯಾಗಿರುವುದಾಗಿ ಹೇಳಿದ್ದಾರೆ. ಕೇಂದ್ರದ ಮಂತ್ರಿಯಾಗಿ ತಾಯಿಗೆ ಮೋಸ ಮಾಡಿದ್ದಾರೆ. ತಾಯಿಗೆ ಮೋಸ ಮಾಡಿದವರನ್ನು ಆ ದೇವರೇ ನೋಡಿಕೊಳ್ಳುತ್ತಾನೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ಕಿರುಕುಳ ಆರೋಪ ಮಾಡಿ ಸಚಿವ ಪ್ರಭು ಚವ್ಹಾಣ್  ಕಣ್ಣೀರು ಹಾಕಿದ್ದಾರೆ.

ಆದರೆ ಖೂಬಾ ಆರೋಪವನ್ನು ನಿರಾಕರಿಸಿದ್ದಾರೆ. ಹಾಗಿದ್ದರೆ, ಪ್ರಚಾರದ ಸಮಯದಲ್ಲಿ ಅವರು ತಮ್ಮ ಸಮಸ್ಯೆಗಳನ್ನು ಏಕೆ ಹೇಳಲಿಲ್ಲ?" ಬೀದರ್ ಮಾತ್ರವಲ್ಲದೆ ರಾಜ್ಯಾದ್ಯಂತ ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇನೆ. ಬೀದರ್‌ನಲ್ಲಿ ಬಿಜೆಪಿಯ ಸಂಖ್ಯೆ 2018 ರಲ್ಲಿ 2 ರಿಂದ 2023 ರಲ್ಲಿ 4 ಕ್ಕೆ ದ್ವಿಗುಣಗೊಂಡಿದೆ ಎಂದು ಖೂಬಾ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.