ರಾಜಕೀಯ

ನಿಮ್ಮನ್ನ ಸಿಎಂ ಆಗೋಕೆ ಬಿಡ್ತಾರ?; ಡಿಕೆ ಶಿವಕುಮಾರ್ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿತು. ಆದರೆ, ಸರ್ಕಾರ ರಚನೆಯ ಕಸರತ್ತಿನಲ್ಲಿ ಮುಖ್ಯಮಂತ್ರಿ ಆಯ್ಕೆಯು ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿತ್ತು. ಇದೀಗ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನಲಾಗಿದ್ದು, ಡಿಕೆ ಶಿವಕುಮಾರ್ ಕಾಂಗ್ರೆಸ್‌ನಲ್ಲಿದ್ದರೆ ಸಿಎಂ ಆಗಲ್ಲ ಎ

ನಿಮ್ಮನ್ನ ಸಿಎಂ ಆಗೋಕೆ ಬಿಡ್ತಾರ?; ಡಿಕೆ ಶಿವಕುಮಾರ್ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!
ಡಿಕೆ ಶಿವಕುಮಾರ್ - ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಸಾಧಿಸಿತು. ಆದರೆ, ಸರ್ಕಾರ ರಚನೆಯ ಕಸರತ್ತಿನಲ್ಲಿ ಮುಖ್ಯಮಂತ್ರಿ ಆಯ್ಕೆಯು ಹೈಕಮಾಂಡ್‌ಗೆ ಸವಾಲಾಗಿ ಪರಿಣಮಿಸಿತ್ತು. ಆದರೀಗ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಚುನಾವಣೆ ಸಮಯದಲ್ಲಿ ಜೋಡೆತ್ತುಗಳಂತೆ ರಾಜ್ಯದಾದ್ಯಂತ ಓಡಾಡಿದ್ದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಫಲಿತಾಂಶ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಇಬ್ಬರ ನಡುವೆ ತೀವ್ರ ಪೈಪೋಟಿ ವ್ಯಕ್ತವಾಗಿತ್ತು. ಆದರೆ ಈಗ, ಕರ್ನಾಟಕ ಸಿಎಂ ಆಯ್ಕೆ ಪ್ರಹಸನಕ್ಕೆ ತೆರೆ ಬಿದ್ದಿದ್ದು, ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗದ್ದುಗೆ ಏರಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಮೇ 20 ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಸಿಎಂ ಆಗಿಯೇ ತೀರಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದ್ದು, ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಗ್ಗೆ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದ ಮಾತು ವೈರಲ್ ಆಗಿದೆ. ವಿಧಾನಸಭೆ ಕಲಾಪದಲ್ಲಿ ಮಾತನಾಡುವ ಸಂದರ್ಭದಲ್ಲಿ ಬಿಎಸ್‌ ಯಡಿಯೂರಪ್ಪ ಅವರು, ನೀವು ಕಾಂಗ್ರೆಸ್‌ನಲ್ಲಿದ್ದರೆ ಮುಖ್ಯಮಂತ್ರಿ ಆಗಬಹುದು ಎಂದುಕೊಂಡಿದ್ದಿರಾ? ಎಂದು ಪ್ರಶ್ನಿಸಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.