ರಾಜಕೀಯ

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿ- ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿ- ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆ ಹುಸಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ ಬಗ್ಗೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಇವುಗಳ ಬಗ್ಗೆ ಮುಖ್ಯಮಂತ್ರಿ ಸರಿಯಾಗಿ ಸ್ಪಷ್ಟನೆ ನೀಡಿಲ್ಲ, ಯಾವಾಗ ಜಾರಿಯಾಗುತ್ತದೆ ಎಂಬುದರ ಬಗ್ಗೆ ಹೇಳಿಲ್ಲ. ಮತದಾರರಿಗೆ ಎಷ್ಟು ಗೌರವಿಸುತ್ತಾರೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದರು. 

ನನ್ನ ಅವಧಿಯಲ್ಲಿ ರಾಜ್ಯ ಸರ್ಕಾರದ ಆದಾಯ ಹೆಚ್ಚಾಗಿತ್ತು. ಮನಸ್ಸು ಮಾಡಿದರೆ ನಾಳೆಯೇ ಮನೆಯ ಯಜಮಾನಿಯ ಖಾತೆಗೆ 2 ಸಾವಿರ ರೂ. ಹಾಕಬಹುದು. ಗ್ಯಾರಂಟಿಗಳನ್ನು ಜಾರಿ ಮಾಡೇ ಮಾಡ್ತೀವಿ ಅಂತಾ ಹೇಳುತ್ತಿದ್ದಾರೆ. ಸುಳ್ಳು ಹೇಳಿ ಜನರನ್ನು ಯಾಮಾರಿಸಲು ಆಗದು, ಇನ್ನೊಂದು ಸಂಪುಟ ಸಭೆಯವರೆಗೂ ಕಾಯೋಣ, ಕಾಂಗ್ರೆಸ್ ಜನರಿಗೆ ನೀಡಿರುವ ಎಲ್ಲಾ ಭರವಸೆ ಈಡೇರಿಸಲಿ ಎಂದ ಅವರು, ಗ್ಯಾರಂಟಿ ಘೋಷಣೆಯಾಗಿಯೇ ಉಳಿಯಲಿದೆ ಎಂದು ಹೇಳಿದರು. 

ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂಬ ಸಿದ್ದರಾಮಯ್ಯ ಅವರ ಆರೋಪ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಇದಕ್ಕೆ ಅಧಿವೇಶನದಲ್ಲಿ ಉತ್ತರ ನೀಡುತ್ತೇವೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ಈ ವರ್ಷ ಸಾಲ ಹೆಚ್ಚಾಗಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.