ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್; ಹೈಕಮಾಂಡ್ ಹೇಳಿದ್ರೆ ಸಿಎಂ ಆಗೋಕೆ ನಾನು ಸಿದ್ಧ: ಪ್ರಿಯಾಂಕ್ ಖರ್ಗೆ
ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂತ ಹೇಳಿದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಮೈಸೂರು: ಹೈಕಮಾಂಡ್ ಯಾರು ಸಿಎಂ ಆಗಬೇಕು ಅಥವಾ ಮುಂದುವರಿಯಬೇಕು ಎಂಬುದನ್ನು ನಿರ್ಧರಿಸುತ್ತದೆ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂತ ಹೇಳಿದರೆ ನಾನು ಸಿದ್ಧನಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಲ್ಕು ಜನ ಕುಳಿತು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಸಿಎಂ ಅವರದ್ದು ವೈಯಕ್ತಿಕ ಅಭಿಪ್ರಾಯ. ಜಿಲ್ಲಾ ಪಂಚಾಯತ್ ಸದಸ್ಯರಿಂದ ಹಿಡಿದು ಶಾಸಕರವರೆಗೆ ಎಲ್ಲರಿಗೂ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರವಿದೆ. ಇದರಲ್ಲಿ ತಪ್ಪು ಏನು ಇಲ್ಲ. ಆದರೆ ಅವರ ಹೇಳಿಕೆ, ಕಲ್ಲಿನ ಕೆತ್ತಿದ ಶಾಸನವಲ್ಲ. ಎಲ್ಲವೂ ಪಕ್ಷದ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದರು.
ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ, ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆ. ಇಲ್ಲಿ ಕಾಂಗ್ರೆಸ್ ವಿರುದ್ಧ ಘರ್ಜಿಸುವ ಬದಲು ಕೇಂದ್ರ ನಾಯಕರ ಬಳಿ ಘರ್ಜಿಸಿದರೆ ವಿಪಕ್ಷ ಸ್ಥಾನವಾದರೂ ಸಿಗುತ್ತಿತ್ತು ಎಂದು ವ್ಯಂಗ್ಯವಾಡಿದರು.
ರಾಜ್ಯ ರಾಜಕೀಯದಲ್ಲಿ ಈಗ ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟವೇ ಹೆಚ್ಚು ಸುದ್ದಿಯಲ್ಲಿದೆ. ಇದುವರೆಗೆ ಪೂರ್ಣಾವಧಿ ಸಿಎಂ ಇಲ್ಲವೇ ಸಿಎಂ ಹುದ್ದೆಯ ಅಧಿಕಾರ ಹಂಚಿಕೆಯ ಬಗ್ಗೆ ಚರ್ಚೆ ನಡೆಯುತ್ತಿತ್ತು, ಆದರೆ, ಸಿಎಂ ಸಿದ್ದರಾಮಯ್ಯ ಅವರು ಹಂಪಿಯಲ್ಲಿ ನಾನೇ ಇನ್ನು ಐದು ವರ್ಷ ಸಿಎಂ ಎಂದು ಹೇಳಿಕೆ ನೀಡುವ ಮೂಲಕ ಮತ್ತೊಂದು ಸುತ್ತಿನ ರಾಜಕೀಯ ದಾಳ ಉರುಳಿಸಿದ್ದರು.
ಅಲ್ಲದೆ, ಮುಂದಿನ ಸಿಎಂ ಅಧಿಕಾರ ಹಂಚಿಕೆ ಸೇರಿದಂತೆ ಯಾವುದೇ ರೀತಿಯಾದಂತಹ ವಿವಾದಿತ ಹೇಳಿಕೆಯನ್ನು ಪಕ್ಷದ ಯಾವೊಬ್ಬ ಸಚಿವರು ಹಾಗೂ ಶಾಸಕರು ನೀಡುವಂತಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿಕೆ ನೀಡಿತ್ತು. ಈಗ ಸಿಎಂ ಹುದ್ದೆ ಬಗ್ಗೆ ಮತ್ತೊಬ್ಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು, ಸಿಎಂ ಆಗಲು ತಾವು ಸಿದ್ಧ ಎಂದು ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


