ಜನರ ಸಂಕಟ ಕೇಳುವವರಿಲ್ಲ, ಕೈ ಸರ್ಕಾರಕ್ಕೆ ಕುರ್ಚಿಯೇ ಎಲ್ಲಾ: ಬಿಜೆಪಿ ವ್ಯಂಗ್ಯ
ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅವಾಂತರಗಳು ಶುರುವಾಗಿದ್ದು, ಜನರ ಸಂಕಟ ಕೇಳುವವರಿಲ್ಲದಂತಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಕುಚ್ಚಿಯೇ ಎಲ್ಲವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅವಾಂತರಗಳು ಶುರುವಾಗಿದ್ದು, ಜನರ ಸಂಕಟ ಕೇಳುವವರಿಲ್ಲದಂತಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಕುಚ್ಚಿಯೇ ಎಲ್ಲವಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಸರಣಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮಹಿಳೆಯರ ಮೇಲೆ ಹಲ್ಲೆ, ಕೊಲೆಗಳು ಮತ್ತೊಮ್ಮೆ ಶುರುವಾಗಿದೆ. 2018 ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ಅಧಿಕಾರಿಗಳು, ಮಹಿಳಾ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆಗಳಾಗುತ್ತಿದ್ದವು, ಈಗ ಒಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಅಧಿಕಾರಿಗಳ ಕೊಲೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ.ಶಿವಕೂಮಾರ್ ಅವರೇ, ಇದೇನಾ ನಿಮ್ಮ ಬ್ರ್ಯಾಂಡ್ ಬೆಂಗಳೂರಿನ ಅಸಲಿಯತ್ತು? ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅವಾಂತರಗಳು ಶುರುವಾಗಿದೆ. ಸರ್ಕಾರಿ ಮಹಿಳಾ ಅಧಿಕಾರಿಗಳ ಕೊಲೆ, ಸರ್ಕಾರಿ ಅಧಿಕಾರಿಗಳ ಮೇಲೆ ಗುಂಪು ಹಲ್ಲೆ, ಭಯೋತ್ಪಾದಕರ ಅಡಗುತಾಣವಾಗುತ್ತಿರುವ ಕರ್ನಾಟಕ, ರಾಜ್ಯದೆಲ್ಲೆಡೆ ಹೆಚ್ಚುತ್ತಿರುವ ಮತೀಯ ಶಕ್ತಿಗಳ ಅಪರಾಧ ಚಟುವಟಿಕೆ, ಮಿತಿ ಮೀರಿದ ಭ್ರಷ್ಟಾಚಾರ, ಕಾಂಗ್ರೆಸ್ ಕರ್ನಾಟಕವನ್ನು ಎಲ್ಲಾ ವಲಯಗಳಲ್ಲಿಯೂ ದಿವಾಳಿ ಮಾಡಲು ಅಧಿಕಾರಕ್ಕೆ ಬಂದಿದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಹದಗೆಡಿಸುವ ಜೊತೆ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದು ಹೇಳಿದೆ.
ರಾಜ್ಯದ ಆರ್ಥಿಕತೆಯನ್ನು ಬೇಜವಾಬ್ದಾರಿಯಿಂದ ನಿರ್ವಹಿಸಿ ಕಾಂಗ್ರೆಸ್ ಸರ್ಕಾರ ಬೊಕ್ಕಸ ಬರಿದು ಮಾಡಿ ಕೂತಿದೆ. ಣ ಹೊಂದಿಸಲು ಚಿಟ್ ಫಂಡ್ ವ್ಯವಹಾರದಿಂದ ಹಣ ಎತ್ತಲು ಸಜ್ಜಾಗಿರುವುದು ವಿಪರ್ಯಾಸ ಮಾತ್ರವಲ್ಲ, ಕಳವಳಕಾರಿ. ಚಿಟ್ ಫಂಡ್ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿ ಜನರಿಗೆ ಟೋಪಿ ಹಾಕಲು ಸಿದ್ದರಾಮಯ್ಯ ಅವರ ಸರ್ಕಾರ ಕಂಡುಕೊಳ್ಳುತ್ತಿರುವ ಹೊಸ ಮಾರ್ಗವಿದು ಎಂದು ಕಿಡಿಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


