ರಾಜಕೀಯ

ಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!

ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.

ಭಿನ್ನಮತ ಶಮನಕ್ಕೆ ಡಿಕೆ ಶಿವಕುಮಾರ್ ಮೆಗಾ ಪ್ಲ್ಯಾನ್; ಶಾಸಕರೊಂದಿಗೆ ಪ್ರತಿದಿನ ಉಪಹಾರ ಸಭೆ!
ಡಿ.ಕೆ ಶಿವಕುಮಾರ್
Published On :

ಬೆಂಗಳೂರು: ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.

ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಡೆಗಟ್ಟುವ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ.

'ಎಲ್ಲ ಶಾಸಕರಿಗೂ ಸಮಯದ ಬಗ್ಗೆ ಗೊಂದಲವಿತ್ತು. ಬೆಳಗ್ಗೆ 10ರಿಂದ 10.30ರವರೆಗೆ (ಶಾಸಕರಿಗೆ) ಸಮಯ ನಿಗದಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಸಮಯ ನಿಗಧಿಗೆ ನಿರ್ಧರಿಸಿದ್ದೇನೆ' ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಈ ಸಭೆಗಳು ಶಾಸಕರ ಮತ್ತು ಅವರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸುವ ಮತ್ತು ಪರಿಹರಿಸುವ ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದರು.

ಡಿಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೊರಗಿರುವ ದಿನಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ದಿನಗಳಲ್ಲಿ ಈ ಸಭೆಗಳು ನಡೆಯುತ್ತವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.