ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ: ಪಕ್ಷ ಪುನಶ್ಚೇತನಕ್ಕೆ ಕಾಂಗ್ರೆಸ್, ಬಿಜೆಪಿ ಮುಂದು!
2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳುು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: 2024ರ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣೆಗೆ ರಾಜಕೀಯ ಪಕ್ಷಗಳುು ಭರ್ಜರಿ ಸಿದ್ಧತೆಗಳ ನಡೆಸುತ್ತಿದೆ. ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದು, ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ ಕುರಿತು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಹಲವು ಸಚಿವರು ಪಕ್ಷದ ಜವಾಬ್ದಾರಿ ಜೊತೆಗೆ ಸಚಿವ ಸ್ಥಾನವನ್ನು ನಿಭಾಯಿಸುತ್ತಿದ್ದಾರೆ. ಹೀಗಾಗಿ ಪದಾಧಿಕಾರಿಗಳ ಬದಲಾವಣೆ ಮಾಡಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
'ಸಚಿವರಾದ ರಾಮಲಿಂಗಾರೆಡ್ಡಿ, ಈಶ್ವರ ಖಂಡ್ರೆ ಮತ್ತು ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದರೆ, ಎಂ.ಬಿ.ಪಾಟೀಲ್ ಮತ್ತು ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಪ್ರಚಾರ ಸಮಿತಿ ಮತ್ತು ಕೆಪಿಸಿಸಿ ಪ್ರಣಾಳಿಕೆ ಸಮಿತಿಯ ನೇತೃತ್ವ ವಹಿಸಿದ್ದಾರೆ.
ಲೋಕಸಭೆ ಮತ್ತು ಇತರ ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ಎರಡೂ ಸ್ಥಾನಗಳನ್ನು ನಿಭಾಯಿಸುವುದು ನಾಯಕರಿಗೆ ಕಷ್ಟಕರವಾಗುವ ಸಾಧ್ಯತೆಗಳಿವೆ ಎಂದು ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳಿನಲ್ಲಿ ಪಕ್ಷ ಪುನಶ್ಚೇತನಗೊಳಿಸಲು ಚಿಂತನೆ ನಡೆಯುತ್ತಿದೆ. ಪಕ್ಷದ ಹೈಕಮಾಂಡ್ ಇತರ ರಾಜ್ಯಗಳಲ್ಲಿ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ಡಿಸೆಂಬರ್ ತಿಂಗಳಿನಲ್ಲಿ ಪದಾಧಿಕಾರಿಗಳ ಬದಲಾವಣೆ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷನಾಗಿ ನೇಮಕಗೊಂಡಿರುವ ಬಿವೈ.ವಿಜಯೇಂದ್ರ ಅವರು ಕೂಡ ಪಕ್ಷದ ರಾಜ್ಯ ಘಟಕವನ್ನು ಪುನಾರಚಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಎಂಎಲ್ಸಿ ಎನ್ ರವಿಕುಮಾರ್ ಅವರು ಮಾತನಾಡಿ, ನವೆಂಬರ್ 15 ರ ನಂತರ ಪುನಾರಚನೆ ಪ್ರಕ್ರಿಯೆ ನಡೆಯುವ ಸಾಧ್ಯತೆಗಳಿವೆ, ಈ ಬಗ್ಗೆ ಚರ್ಚಿಸಿ ರಾಜ್ಯ ಪದಾಧಿಕಾರಿಗಳ ಬದಲಾವಣೆ ಕುರಿತು ನಿರ್ಧಾರ ಕೈಗೊಳ್ಳುತ್ತೇವೆ. ಅಲ್ಲಿಯವರೆಗೆ ಹಾಲಿ ಪದಾಧಿಕಾರಿಗಳು ನೂತನ ಅಧ್ಯಕ್ಷರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ' ಎಂದು ಹೇಳಿದರು.
ಏತನ್ಮಧ್ಯೆ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವಂತೆ ಬಿಜೆಪಿ ನಾಯಕರ ಮೇಲೆ ಒತ್ತಡವಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆಯಲ್ಲಿ ಪಕ್ಷಕ್ಕೆ ಸಹಾಯಕವಾಗುವ, ಸಾಮರ್ಥ್ಯ ಇರುವ ಹಾಗೂ ಪ್ರಾಮಾಣಿಕ ನಾಯಕರನ್ನು ಆಯ್ಕೆ ಮಾಡಬೇಕಿದೆ. ಇದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಆದರೆ, ಚುನಾವಣೆಗಳು ಹತ್ತಿರ ಇರುವುದರಿಂದ ಈ ಕುರಿತ ಅಂತಿಮವಾಗಿ ಪಕ್ಷ ನಿರ್ಧಾರ ಕೈಗೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


