ಇಂದು ಬಿಜೆಪಿ ಶಾಸಕಾಂಗ ಸಭೆ: ಕೇಂದ್ರ ವೀಕ್ಷಕರಾಗಿ ನಿರ್ಮಲಾ ಸೀತಾರಾಮನ್, ದುಷ್ಯಂತ್ ಗೌತಮ್ ಭಾಗಿ
ಬೆಂಗಳೂರಿನಲ್ಲಿ ಇಂದು ಸಂಜೆ ಮಹತ್ವದ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಸಂಜೆ ಮಹತ್ವದ ಬಿಜೆಪಿ ಶಾಸಕಾಂಗ ಸಭೆ ನಡೆಯಲಿದ್ದು, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ರಾಜ್ಯ ವಿಧಾನಮಂಡಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಮುಂದಾಗಿದೆ ಎನ್ನಲಾಗಿದೆ.
ಈ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಗೌತಮ್ ಕೇಂದ್ರ ವೀಕ್ಷಕರಾಗಿ ಭಾಗವಹಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಈ ನಾಯಕರಿಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ವಾಗತ ಕೋರಿದರು.
ಶಾಸಕಾಂಗ ಪಕ್ಷದ ಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಪಡೆದು ಹೆಸರು ಪ್ರಕಟಿಸುವ ಸಾಧ್ಯತೆಯಿದೆ. ಶಾಸಕರಾದ ಸುನೀಲ್ ಕುಮಾರ್ ವಿ, ಅಶ್ವತ್ಥ್ ನಾರಾಯಣ್ ಮತ್ತು ಆರಗ ಜ್ಞಾನೇಂದ್ರ ಅವರ ಜೊತೆಗೆ ಆರ್ ಅಶೋಕ್ ಅವರ ಹೆಸರು ಈ ಹುದ್ದೆಗೆ ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


