ಭ್ರಷ್ಟಾಚಾರದಲ್ಲಿ ಡಿಕೆ ಶಿವಕುಮಾರ್ ತಪಿತಸ್ಥ: ಪರೋಕ್ಷವಾಗಿ ಒಪ್ಪಿಕೊಂಡ ಸಿದ್ದು ಸರ್ಕಾರ- ಸಿಟಿ ರವಿ
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯುವ ಮೂಲಕ ಅವರು ಭ್ರಷ್ಟಾಚಾರ ಪ್ರಕರಣದಲ್ಲಿ ತಪಿತಸ್ಥ ಎಂಬುದನ್ನು ಸಿದ್ದರಾಮಯ್ಯ ಸರ್ಕಾರ ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರಜಾಪ್ರಭುತ್ವ ಮತ್ತು ನೈತಿಕತೆಯ ಬಗ್ಗೆ ಯಾವಾಗಲೂ ಉಪನ್ಯಾಸ ನೀಡುವ ಕಾಂಗ್ರೆಸ್ ತನಿಖಾ ಸಂಸ್ಥೆಗಳಿಗೆ ತಮ್ಮ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಕಾನೂನು ತನ್ನದೇ ಆದ ಕ್ರಮ ತೆಗೆದುಕೊಳ್ಳಲಿದೆ ಎಂದಿದ್ದಾರೆ.
ಭ್ರಷ್ಟ ಡಿಕೆ ಶಿವಕುಮಾರ್ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆಯಲ್ಲಿ ತಪ್ಪಿತಸ್ಥರು ಎಂಬುದು ಬಹಳ ಸ್ಪಷ್ಟವಾಗಿದೆ. ಡಿಕೆ ಶಿವಕುಮಾರ್ ದೋಷಿ ಎಂದು ಸಾಬೀತಾದರೆ ಅವರು ಜೈಲಿಗೆ ಹೋಗುವುದು ಮಾತ್ರವಲ್ಲದೆ ಭ್ರಷ್ಟಾಚಾರದ ಹಣ ಪಡೆದ ಅವರ ಯಜಮಾನರು ಕೂಡ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಲೇ ಭ್ರಷ್ಟ ಕಾಂಗ್ರೆಸ್ ಸರ್ಕಾರ ಸಿಬಿಐ ತನ್ನ ಸಾಂವಿಧಾನಿಕ ಕರ್ತವ್ಯವನ್ನು ಮಾಡದಂತೆ ತಡೆಯಲು ಹೊರಟಿದೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


