ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸಿಗೆ ನಿರ್ಧಾರ: ದರೋಡೆಕೋರರ ರಕ್ಷಿಸಲು ಕಾಂಗ್ರೆಸ್ ಅಧಿಕಾರದಲ್ಲಿದೆ; ಹೆಚ್ಡಿ ಕುಮಾರಸ್ವಾಮಿ ಟೀಕೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ನಿರ್ಧಾರವನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿರುವುದರ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್'ಡಿ.ಕುಮಾರಸ್ವಾಮಿಯವರು ಶುಕ್ರವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರೋಡೆಕೋರರ ರಕ್ಷಣೆ ಮಾಡಲು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಡಿಕೆ.ಶಿವಕುಮಾರ್ ವಿರುದ್ಧದ ಪ್ರಕರಣ ಪ್ರಸ್ತುತ ನ್ಯಾಯಾಲಯದ ಅಂಗಳದಲ್ಲಿದೆ. ನ್ಯಾಯಾಲಯ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನ್ಯಾಯಾಲಯದ ನಿರ್ಧಾರದ ಬಳಿಕ ನಾನು ಪ್ರತಿಕ್ರಿಯೆ ನೀಡುತ್ತೇನೆಂದು ಹೇಳಿದರು.
ಮರ್ಯಾದೆ ಇಲ್ಲದವರಿಗೆ ಕೋರ್ಟ್ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಎನ್ನುವ ದುರಹಂಕಾರ ಇದೆ ಎಂದು ಇದೇ ವೇಳೆ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ವಕೀಲ ಉಪನ್ಯಾಸಕರಾಗಿ ಕೆಲಸ ಮಾಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಸರಿಯಲ್ಲ. ಸುಪ್ರೀಂ ಕೋರ್ಟ್ ನೀಡಿದ್ದ ಹಲವು ತೀರ್ಪುಗಳು ನನ್ನ ಕಣ್ಮುಂದೆ ಇದೆ. ಇದೇ ವಿಷಯವಾಗಿ ಎರಡು ಬಾರಿ ಹೈಕೋರ್ಟ್ನಲ್ಲಿ ಚರ್ಚೆ ಆಗಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿ ಇದ್ದಾಗ ರಾಜ್ಯ ಸರ್ಕಾರದ ನಿರ್ಧಾರ ತೆಗೆದುಕೊಂಡಿರುವುದು ತಪ್ಪು. ಕಾನೂನಿಗಿಂತ ದೊಡ್ಡವರು ಎಂಬುದನ್ನು ಪ್ರದರ್ಶನ ಮಾಡಿಕೊಂಡಿದ್ದಾರೆ. ಲೂಟಿ ಮಾಡುವವರಿಗೆ ನಮ್ಮ ಸರ್ಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


