ಬಿಜೆಪಿಯವರು ಬ್ರಿಟಿಷರು ಇದ್ದಂತೆ, ಚುನಾವಣೆಗಾಗಿ ಅಮಾಯಕ ಸೈನಿಕರ ಬಲಿಕೊಟ್ಟಿದ್ದರು: ಕಾಂಗ್ರೆಸ್ ಶಾಸಕ ಬಾಲಕೃಷ್ಣ
ಬಿಜೆಪಿಯವರು ಬ್ರಿಟಿಷ್ ನವರು ಇದ್ದಂತೆ. ಅಮಾಯಕ ಸೈನಿಕರನ್ನ ಬಲಿಕೊಟ್ಟಂತಹ ಕೀರ್ತಿ ಬಿಜೆಪಿಯದ್ದು ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ರಾಮನಗರ: ಬಿಜೆಪಿಯವರು ಬ್ರಿಟಿಷ್ ನವರು ಇದ್ದಂತೆ. ಅಮಾಯಕ ಸೈನಿಕರನ್ನ ಬಲಿಕೊಟ್ಟಂತಹ ಕೀರ್ತಿ ಬಿಜೆಪಿಯದ್ದು ಎಂದು ಮಾಗಡಿ ಕಾಂಗ್ರೆಸ್ ಶಾಸಕ ಹೆಚ್ಸಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತೂಬಿನಕೆರೆ ಗ್ರಾಮದಲ್ಲಿ ಮಾತನಾಡಿರುವ ಅವರು, ಬಿಜೆಪಿಯವರು ಬ್ರಿಟಿಷರು ಇದ್ದಂತೆ, ಯಾರು ಪ್ರಬಲವಾಗಿರುತ್ತಾರೆ ಅವರ ಮಧ್ಯೆ ಗುಂಪು ಕಟ್ಟಿ ಎತ್ತಿಕಟ್ಟಿ ಒಡೆದಾಳುವ ನೀತಿ ಅನುಸರಿಸುತ್ತಾರೆ. ದೇಶದಲ್ಲಿ ಅಮಾಯಕ ಸೈನಿಕರನ್ನು ಬಲಿ ಕೊಟ್ಟಂತಹ ಕೀರ್ತಿ ಮೋದಿ ಸರಕಾರಕ್ಕೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ದೇಶ ಆಳುವ ವ್ಯಕ್ತಿಗೆ ನಮ್ಮ ಸೈನಿಕರಿಗೆ ತೊಂದರೆ ಇದೆ ಎಂದು ಅವರ ಸರಕಾರಕ್ಕೆ ಹೇಳಲು ಸಾಧ್ಯವಿಲ್ಲ ಎನ್ನುವುದಾದರೆ ಹೇಗೆ?. ಬಲಿದಾನವಾಗಿದ್ದು ಸೈನಿಕರು, ಅಧಿಕಾರ ಬಂದಿದ್ದು ಮೋದಿಗೆ. ಈ ಬಗ್ಗೆ ಜನತೆ ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ವೇಳೆ ಕುಮಾರಸ್ವಾಮಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕುಮಾರಣ್ಣ ಮಾತೆತ್ತಿದ್ರೆ ನಾವು ಜಾತ್ಯಾತೀತ ಅಂತಾರೆ. ಆದರೆ, ದೇವೇಗೌಡರು ಸಾಯುವ ಕಾಲದಲ್ಲಿ ಕೋಮುವಾದಿ ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಎಸ್‍ಪಿಗೆ ಬಂದ ಗತಿ, ಕರ್ನಾಟಕದಲ್ಲಿ ಜೆಡಿಎಸ್'ಗೆ ಬರಲಿದೆ. ಆ ರೀತಿ ಜೆಡಿಎಸ್ ಪಕ್ಷವನ್ನ ಬಿಜೆಪಿಯವರು ಮಾಡದಿದ್ದರೆ, ನಾನು ನನ್ನ ಹೆಸರು ಬದಲಾಯಿಸಿಕೊಳ್ತೀನಿ. ಜೆಡಿಎಸ್ ಎಚ್ಚೆತ್ತುಕೊಳ್ಳದಿದ್ದರೆ ಸಂಪೂರ್ಣ ಅಸ್ಥಿತ್ವವೇ ಮುಗಿಯುತ್ತೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


