ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ಸೇರಿ ಮೋದಿ ಕೈ ಬಲಪಡಿಸೋಣ: ಈಶ್ವರಪ್ಪ ಭೇಟಿ ನಂತರ ವಿಜಯೇಂದ್ರ ಹೇಳಿಕೆ
ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.

ಶಿವಮೊಗ್ಗ: ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಕಾರ್ಯಾಲಯ ಭೇಟಿಯ ನಂತರ ಮತ್ತೂರಿಗೆ ತೆರಳಿ ಆರ್ಎಸ್ಎಸ್ನ ಪ್ರಮುಖರಾದ ಪಟ್ಟಾಭಿ ಅವರ ಮನೆಗೆ ಭೇಟಿ ನೀಡಿದರು. ನಂತರ ಮಲ್ಲೇಶ್ವರ ನಗರದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮನೆಗೆ ತೆರಳಿದರು. ಈ ವೇಳೆ ಈಶ್ವರಪ್ಪ ಅವರು ವಿಜಯೇಂದ್ರ ಅವರಿಗೆ ಹಾರ ಹಾಕಿ ಸ್ವಾಗತ ಮಾಡಿದರು. ಬಳಿಕ ವಿಜಯೇಂದ್ರಗೆ ಸಿಹಿ ತಿನಿಸಿದರು. ಕೆಲ ಹೊತ್ತು ಪಕ್ಷದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು.
ಈ ವೇಳೆ ಈಶ್ವರಪ್ಪ ದಂಪತಿಯ ಆಶೀರ್ವಾದ ಪಡೆದರು. ಮನೆಗೆ ಬಂದ ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ. ಕಾಂತೇಶ ಸ್ವಾಗತಿಸಿದರು. ಈ ವೇಳೆ ಈಶ್ವರಪ್ಪ ಅವರನ್ನು ಶಾಲು ಹಾಕಿ ವಿಜಯೇಂದ್ರ ಸನ್ಮಾನ ಮಾಡಿದರು.
ವಿಜಯೇಂದ್ರ ಅವರನ್ನು ಅಭಿನಂದಿಸಿ ಈಶ್ವರಪ್ಪ ಸಿಹಿ ತಿನ್ನಿಸಿದರು. ಈಶ್ವರಪ್ಪ ಪತ್ನಿ ಜಯಲಕ್ಷ್ಮಮ್ಮ ಕೂಡ ದೇವರ ಕೋಣೆಗೆ ಕರೆದೊಯ್ದು ವಿಜಯೇಂದ್ರ ಅವರಿಗೆ ಬಾಳೆಹಣ್ಣು ನೀಡಿದರು. ಈ ವೇಳೆ ಕಾರ್ಯಕರ್ತರು ಜಯ ಘೋಷ ಮಾಡಿದರು. ನಂತರ ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು.
ಇಂದು ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ''ನಾನು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಆಯಾ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತೇನೆ. ಬಳಿಕ ಬೂತ್ ಕಾರ್ಯಕರ್ತರ ಮನೆಗೆ ಭೇಟಿ ಕೊಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ನಾವು ಯಾವಾಗಲೂ ಸಮಯಕ್ಕೆ ಸರಿಯಾಗಿ ಭೇಟಿ ನೀಡುವುದು ಮುಖ್ಯವಾಗುತ್ತದೆ.
ನನ್ನನ್ನು ಅದ್ಧೂರಿಯಾಗಿ ಬರಮಾಡಿಕೊಂಡ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು. ವೇದಿಕೆಯಲ್ಲಿ ಇರುವ ಮುಖಂಡರಂತೆ ವೇದಿಕೆ ಮುಂಭಾಗ ಇರುವ ಕಾರ್ಯಕರ್ತರು ಸಹ ಮುಖ್ಯವಾಗಿದ್ದಾರೆ. ನಾವೆಲ್ಲಾ ಸೇರಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಚೆನ್ನಾಗಿ ಕೆಲಸ ಮಾಡಿ, ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡೋಣ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


