ಸಿದ್ದರಾಮಯ್ಯ 10 ವರ್ಷ ಸಿಎಂ ಆಗಲಿ ಎಂದ ಬಿಜೆಪಿ ಶಾಸಕ!, ವಿಡಿಯೋ ವೈರಲ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದು ರಾಯಚೂರು ಬಿಜೆಪಿ ಶಾಸಕ ಡಾ. ಶಿವರಾಜ್ ಪಾಟೀಲ್ ಅವರು ಗರುವಾರ ಹೇಳಿದ್ದು, ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.
ಇಂದು ನಗರದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವರಾಜ್ ಪಾಟೀಲ್ ಅವರು, ಈ ಹಿಂದೆ ದೇವರಾಜ ಅರಸು 8 ವರ್ಷ ಮುಖ್ಯಮಂತ್ರಿ ಆಗಿದ್ದರು. ನಿಮ್ಮೆಲ್ಲರ ಆರ್ಶೀವಾದಿಂದ ಸಿದ್ದರಾಮಯ್ಯ ಅವರು 10 ವರ್ಷ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಕಾಲ ರಾಜ್ಯವಾಳಲಿ. ಅವರು ಮುಖ್ಯಮಂತ್ರಿಯಾಗಿರುವವರೆಗೆ ಕುರುಬ ಸಮಾಜಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಬಿಜೆಪಿ ಶಾಸಕ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


