ರಾಜಕೀಯ

ಚಿಂತೆ ಇಲ್ಲದವನಿಗೆ, ದಂಗೆಯಲ್ಲಿಯೂ ನಿದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಚಿಂತೆ ಇಲ್ಲದವನಿಗೆ, ದಂಗೆಯಲ್ಲಿಯೂ ನಿದ್ದೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟೀಕಾ ಪ್ರಹಾರ
ಬಿಜೆಪಿ ಮಾಡಿರುವ ಫೋಸ್ಟ್ ನಲ್ಲಿ ಕಂಡುಬಂದ ಚಿತ್ರ
Published On :

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡ- ಶಾಂತಿನಗರ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ನಡೆದ ಹಿಂಸಾಚಾರ ವಿಚಾರ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಣಿ ಫೋಸ್ಟ್ ಮಾಡಿರುವ ಬಿಜೆಪಿ, ಚಿಂತೆ ಇಲ್ಲದವನಿಗೆ ದಂಗೆಯಲ್ಲಿಯೂ ನಿದ್ದೆ. ಕರ್ನಾಟಕ ಓಲೈಕೆ ರಾಜಕಾರಣದ ಪರಾಕಷ್ಟೆಯಲ್ಲಿ ದಹಿದಹಿಸುತ್ತಿದೆ ಎಂದು ಕಿಡಿಕಾರಿದೆ. 

ಸಿಎಂ, ಡಿಸಿಎಂ, ಮೂರು ಡಿಸಿಎಂ, ದಲಿತ ಸಿಎಂ, ಲಿಂಗಾಯಿತರು, ಬಿಕೆ ಹರಿಪ್ರಸಾದ್  ಒಳಜಗಳ, ಡಿಕೆ ಶಿವಕುಮಾರ್ ಜಾತಿವಾದಿ ಗುಂಪುಗಾರಿಕೆ, ವಿರೋಧಿಗಳ ಚಿಂತೆಯಲ್ಲಿ ಸಿದ್ದರಾಮಯ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ಲಕ್ಷಿಸಿದ್ದಾರೆ ಎಂಬರ್ಥದಲ್ಲಿ ಆರೋಪಿಸಿದೆ. 

ಮೂಲಭೂತವಾದಿಗಳನ್ನು ಬಿಡುಗಡೆಗೊಳಿಸುವ ಮುಖ್ಯಮಂತ್ರಿ, ಅಮಾಯಕರೆಂದು ಕ್ಲೀನ್ ಚಿಟ್ ಕೊಡುವ ಗೃಹ ಸಚಿವರು, ಮಾನಸಿಕ ಸ್ಥಿಮಿತ ಕಳೆದುಕೊಂಡವರಂತೆ ಹೇಳಿಕೆ ಕೊಡುವ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾಗ ಶಿವಮೊಗ್ಗದಲ್ಲಿ ಗಲಭೆ ನಡೆಯದೆ ಮತ್ತೇನು ತಾನೆ ನಡೆದೀತು ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.