ಅ. 20 ರಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ
ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕೇಸರಿ ಪಾಳಯಕ್ಕೆ ಶಾಕ್ ನೀಡಿದ್ದು, ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಬೆಂಗಳೂರು: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಕೇಸರಿ ಪಾಳಯಕ್ಕೆ ಶಾಕ್ ನೀಡಿದ್ದು, ಅಕ್ಟೋಬರ್ 20 ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಮಾಜಿ ಶಾಸಕಿ ಪೂರ್ಣಿಮಾ ಅವರು ಕಾಂಗ್ರೆಸ್ ಸೇರಲಿದ್ದಾರೆ.
ಅಕ್ಟೋಬರ್ 20 ರಂದು ಕೆಪಿಸಿಸಿ ಅಧ್ಯಕ್ಷ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅ.20 ರಂದು ಪತಿ ಶ್ರೀನಿವಾಸ್ ಜೊತೆ ಮಾಜಿ ಶಾಸಕಿ ಕಾಂಗ್ರೆಸ್ ಸೇರಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


