ರಾಜಕೀಯ

'ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಯನ್ನು ಪಕ್ಷದಿಂದ ಉಚ್ಛಾಟಿಸುತ್ತಿದ್ದೆ'

ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ‌.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ.

'ನಾನು ಜೆಡಿಎಸ್ ಅಧ್ಯಕ್ಷನಾಗಿದ್ದರೆ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಕುಮಾರಸ್ವಾಮಿಯನ್ನು ಪಕ್ಷದಿಂದ ಉಚ್ಛಾಟಿಸುತ್ತಿದ್ದೆ'
ಎಚ್.ಡಿ ಕುಮಾರಸ್ವಾಮಿ
Published On :

ಮೈಸೂರು: ನಾನು ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷನಾಗಿದ್ದರೆ ಜಾತ್ಯಾತೀತ ವಾದವನ್ನು ಬದಿಗೊತ್ತಿ ಮತೀಯವಾದಿಗಳ ಜೊತೆ ಕೈ ಜೋಡಿಸಿರುವ ಎಚ್.ಡಿ‌.ಕುಮಾರಸ್ವಾಮಿಯನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡುತ್ತಿದ್ದೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ರಾಜಕಾರಣದ ಇಂದಿನ ಪರಿಸ್ಥಿತಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತೆಗೆದುಕೊಂಡಿರುವ ನಿಲುವು ಸರಿಯಾಗಿದೆ, ಇಬ್ರಾಹಿಂ ಅವರಿಗೆ  ಅಧಿಕಾರವಿದ್ದು, ಅವರು ಕುಮಾರಸ್ವಾಮಿ ವಿರುದ್ಧ ಕ್ರಮ ಜರುಗಿಸಲಿದ್ದಾರೆ ಎಂದು ವಿಶ್ವನಾಥ್ ಹೇಳಿದರು.

ಇಬ್ರಾಹಿಂ ಅವರು ಜೆಡಿಎಸ್ ರಾಷ್ಟ್ರಾಧ್ಯಕ್ಷರಿಗೆ ವಿಧೇಯನಾಗಿರುತ್ತೇನೆ ಎಂದಿದ್ದಾರೆ. ಜಾತ್ಯಾತೀತವಾದವನ್ನು ಕೊಲೆ ಮಾಡಿ ಜಾತಿವಾದಿ ಕೋಮುವಾದಿಗಳ ಜೊತೆ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮದುವೆಯಾದರೆ ಒಪ್ಪಲು ಸಾಧ್ಯವೇ? ಹಾಗಾಗಿ ರಾಜ್ಯಾಧ್ಯಕ್ಷರಾಗಿ ಸಿ.ಎಂ‌.ಇಬ್ರಾಹಿಂ ಅವರಿಗೆ ಸಂಪೂರ್ಣ ಅಧಿಕಾರ ಇದ್ದು ಕುಮಾರಸ್ವಾಮಿ ಅವರ ಮೇಲೆ ಕ್ರಮ ಜರುಗಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.