ಲೋಕಸಭಾ ಚುನಾವಣೆ ವೇಳೆಗೆ ಕಾಂಗ್ರೆಸ್ ಸರ್ಕಾರ ಪತನ: ಕೆ ಎಸ್ ಈಶ್ವರಪ್ಪ
ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ರಾಯಚೂರು: ರಾಜ್ಯದಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪದೇ ಪದೇ ಸರ್ಕಾರ ಪತನವಾಗಲಿದೆ ಎಂದು ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಕುರಿತು ಶುಕ್ರವಾರ ರಾಯಚೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮಾತನಾಡಿ, 2024 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಸರ್ಕಾರ ಬಿದ್ದುಹೋಗತ್ತದೆ ಎಂದು ಕಿಡಿಕಾರಿದ್ದಾರೆ.
ದೇಶದಲ್ಲೇ ಕಾಂಗ್ರೆಸ್ ನವರಿಗೆ ಅಧಿಕಾರ ಇರ್ಲಿಲ್ಲ. ರಾಜ್ಯದಲ್ಲಿ ಈಗ ಗ್ಯಾರಂಟಿ ಅದು, ಇದು ಮೋಸ ಮಾಡಿ ಹೇಳಿ ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದಿದ್ದಾರೆ. ಈಗ ಅಕ್ರಮ ಅಸ್ತಿ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೇಸ್ ಬಂದಿದೆ.
ಇನ್ನೂ ಸಚಿವರಾದ ಸತೀಶ್ ಜಾರಕಿಹೋಳಿ ಎಷ್ಟು ಜನರನ್ನ ಕರೆದೊಯ್ತಾರೊ ಗೊತ್ತಿಲ್ಲ. ಸರ್ಕಾರ ಬಿದ್ದೊಗತ್ತೆ ಅನ್ನೊದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


