ಪಕ್ಷದಲ್ಲಿನ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು, ಬಿಎಸ್‌ವೈಗೆ ಬಿಜೆಪಿ ನಾಯಕತ್ವ ನೀಡಬೇಕು: ರೇಣುಕಾಚಾರ್ಯ
ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿರುವ ಸರ್ವಾಧಿಕಾರಿ ಧೋರಣೆ ಕೊನೆಗೊಳ್ಳಬೇಕು. ಬಿಎಸ್.ಯಡಿಯೂರಪ್ಪ ಅವರ ಕೈಗೆ ಬಿಜೆಪಿ ನಾಯಕತ್ವ ನೀಡಬೇಕೆಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿರುವ ಅವರು, ಸ್ವಪಕ್ಷದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ನಾವು ಮಾತನಾಡಿದರೆ ಪಕ್ಷವಿರೋಧಿ, ಅವರು ಮಾತನಾಡಿದರೆ ಪಕ್ಷ ಸಂಘಟನೆ. ಎಂಎಲ್ಸಿ ಹಾಗೂ ರಾಜ್ಯಸಭಾ ಸ್ಥಾನ ಅವರು ಹೇಳಿದವರಿಗೆ ನೀಡಲಾಗುತ್ತಿದೆ. ಅವರ ಒಳ ಹೊಡೆತಗಳು ಹೇಳತೀರದು ಎಂದು ಪರೋಕ್ಷವಾಗಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದರು,
“ಬಿಎಸ್ ಯಡಿಯೂರಪ್ಪ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದಾರೆ. ರಾಜ್ಯಕ್ಕೆ ಅವರಂತಹ ಜಾತ್ಯತೀತ ಹಾಗೂ ಸಮರ್ಥ ನಾಯಕ ಬೇಕು. ವಿಜಯದಶಮಿ ದಿನ ಒಂದು ಮಾತು ಹೇಳುತ್ತಿದ್ದೇನೆ, ರಾಜ್ಯದಲ್ಲಿ ಬಿಎಸ್ವೈ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಸೂಕ್ತ. ಬಿಎಸ್ವೈ ಹೊರಟರೆ ಲಕ್ಷಾಂತರ ಕಾರ್ಯಕರ್ತರು ಹಿಂದೆ ನಿಲ್ಲುತ್ತಾರೆ ಎಂದು ಹೇಳಿದರು.
ನಾನು ಸಹ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಆಗಿದ್ದೆ. ಭಾರತೀಯ ಜನತಾ ಪಕ್ಷದಲ್ಲಿ ಸರ್ವಾಧಿಕಾರಿ ಧೋರಣೆ ಹೋಗಬೇಕು. ಮೊನ್ನೆ ಚುನಾವಣೆ ವೇಳೆ ಹೊಸ ಮುಖಗಳಿಗೆ ಟಿಕೆಟ್ ನೀಡಲಾಯಿತು. ಹಳಬರ ಕಾಲು ಏನಾದರೂ ಬಿದ್ದು ಹೋಗಿದ್ದವಾ? ಚುನಾವಣೆ ವೇಳೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕಿತ್ತು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡೋದು ಬೇಡ ಎಂದು ಒತ್ತಡ ಹಾಕಿದ್ದೆವು. ಕೆಲ ನಾಯಕರು ಯಡಿಯೂರಪ್ಪರನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತಾದ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿ, ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡೋಣ. ಒಟ್ಟಾರೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಮಂತ್ರಿ ಆಗಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


