'ಕೈಲಾಗದವರಿಗೆ ಸದಾ ಕೇಂದ್ರದ ಮೇಲೆ ಕಲ್ಲು ತೂರುವುದೇ ಕೆಲಸ'
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಎಟಿಎಂ ಸರ್ಕಾರ ನಿಲ್ಲಿಸಿಲ್ಲ. ಇದೊಂದು ಲೂಟಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಎಟಿಎಂ ಸರ್ಕಾರ ನಿಲ್ಲಿಸಿಲ್ಲ. ಇದೊಂದು ಲೂಟಿ ಸರ್ಕಾರವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಕಂಡ ಪ್ರಪ್ರಥಮ ಏಕಪಕ್ಷದ ಸಮ್ಮಿಶ್ರ ಸರ್ಕಾರವಿದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಶುರುವಾದ ಕಲೆಕ್ಷನ್ ದಂಧೆ ಈಗ ಕಾಂಗ್ರೆಸ್ ಪಕ್ಷದಲ್ಲೇ ಕದನ ಶುರು ಮಾಡಿದೆ. ಪರಿಣಾಮವಾಗಿ,
ಡಿ. ಕೆ. ಶಿವಕುಮಾರ್ ಅವರು ಸದ್ಯದಲ್ಲೇ ಸಿದ್ದರಾಮಯ್ಯರವರನ್ನು ಇಳಿಸಿ ಮುಖ್ಯಮಂತ್ರಿ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಿಂದಲೇ ಮಾಹಿತಿ.
ತಮ್ಮ ತಂದೆಯವರ ಪ್ರಭಾವ ಬಳಿಸಿ ಎಲ್ಲೆಲ್ಲೂ ತನ್ನದೇ ನಡೆಯಲಿ ಎನ್ನುತ್ತಿರುವ ಪ್ರಿಯಾಂಕ್ ಖರ್ಗೆಯವರು.
ಮೈಸೂರು ಪ್ರವಾಸದ ಪುಕಾರು ಹಬ್ಬಿಸಿ ಕೆಪಿಸಿಸಿ ಅಧ್ಯಕ್ಷರನ್ನೇ ಅಲುಗಾಡಿಸಿದ ಸತೀಶ್ ಜಾರಕಿಹೊಳಿಯವರು.
ಈಗ ಕೆಲಸ ಬಿಟ್ಟು ವಿದೇಶಕ್ಕೆ ಹಾರಲು ಸಜ್ಜಾದ ಇತರ ಸನ್ಮಿತ್ರರು.
ಕತ್ತಲಾದ ಮೇಲಷ್ಟೇ ಚರ್ಚಿಸಬಹುದಾದ ವಿಚಾರ ಮತ್ತು ಲೆಕ್ಕಾಚಾರಗಳ ಮಾತುಕತೆಗೆ "ಆಯ್ದ ಆಮಂತ್ರಿತರ ಡಿನ್ನರ್."
ಹಣಕಾಸಿನ ಲೆಕ್ಕಾಚಾರಗಳಿರುವಾಗ ಭಿನ್ನಾಭಿಪ್ರಾಯ ಸಹಜ. ಕಲೆಕ್ಷನ್ ವ್ಯವಹಾರ ಬದಿಗಿಟ್ಟು ಹೊರರಾಜ್ಯ ಚುನಾವಣೆಗಳಿಗೆ ಫಂಡ್ ಕಳಿಸಲು ಅಸಾಧ್ಯ ಎಂಬುದನ್ನು ಹೈ ಕಮಾಂಡ್‌ಗೆ ತಿಳಿಸಿ. ರಾಜ್ಯ ಸರ್ಕಾರ ಸುಲಲಿತವಾಗಿ ನಡೆಯುತ್ತದೆ ಎಂದು ಬಿಜೆಪಿ ಕಿಡಿ ಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


