ರಾಜಕೀಯ

ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ತಂತ್ರ; ಜೆಡಿಎಸ್-ಬಿಜೆಪಿ ಮೈತ್ರಿ ಮಂತ್ರ: ಅಮಿತ್ ಶಾ- ದೇವೇಗೌಡ ರಹಸ್ಯ ಭೇಟಿ?

ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ತಂತ್ರ; ಜೆಡಿಎಸ್-ಬಿಜೆಪಿ ಮೈತ್ರಿ ಮಂತ್ರ: ಅಮಿತ್ ಶಾ- ದೇವೇಗೌಡ ರಹಸ್ಯ ಭೇಟಿ?
ದೇವೇಗೌಡ ಮತ್ತು ಅಮಿತ್ ಶಾ
Published On :

ನವದೆಹಲಿ: ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಅವರನ್ನು ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು  ಭೇಟಿ ಮಾಡಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಪ್ರಜ್ವಲ್ ರೇವಣ್ಣ  ಅವರ ಕೋರ್ಟ್ ಕೇಸ್ ಗೆ ಸಂಬಂಧಿಸಿದಂತೆ ವಕೀಲರ ಭೇಟಿಗೆ ತೆರಳಿದ್ದ ದೇವೇಗೌಡರು ಇದೇ ವೇಳೆ ರಹಸ್ಯವಾಗಿ ಅಮಿತ್ ಶಾ ಜೊತೆ ಚರ್ಚೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ಮೈತ್ರಿ ಬಗ್ಗೆ ಅನೌಪಚಾರಿಕವಾಗಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ,

ಅಮಿತ್ ಶಾ ಭೇಟಿ ವೇಳೆ ಅನೌಪಚಾರಿಕವಾಗಿ ಮೈತ್ರಿ ಮಾತುಕತೆ ನಡೆಸಿರುವ ದೇವೇಗೌಡರು ನಾಲ್ಕೈದು ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗ್ತಿದೆ. ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವಂತೆ ಕೇಳಿರುವ ದೇವೇಗೌಡರು, ಈ ಭಾಗದಲ್ಲಿ ನಮಗೆ ಹೆಚ್ಚು ಶಕ್ತಿ ಇದೆ. ನೀವು ನಮ್ಮ ಕೈ ಜೋಡಿಸಿ, ಉಳಿದ ಕಡೆ ನಾವು ನಿಮಗೆ ಬೆಂಬಲ ನೀಡುವುತ್ತೇವೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ದೇವೇಗೌಡರ ಬೇಡಿಕೆಗೆ ಒಪ್ಪಿಗೆ ಸಿಕ್ಕಿದರೆ ಸೆ. 10ರ ಸಮಾವೇಶದ ಬಳಿಕ ಜೆಡಿಎಸ್‌ ನಿರ್ಧಾರ ಪ್ರಕಟವಾಗಲಿದೆ.

ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂದೆ ಯಾರಿಗೆ ಬೆಂಬಲ ನೀಡಬೇಕು ಎಂಬುವುದರ ಬಗ್ಗೆ ತೀರ್ಮಾನ ಆಗಬೇಕಿದೆ. ನಾವು ‘ಇಂಡಿಯಾ’ ಒಕ್ಕೂಟದ ಯಾವುದೇ ಸಭೆಗೆ ಹಾಜರಾಗಿಲ್ಲ ಎಂದು ಕೆಲ ದಿನಗಳ ಹಿಂದೆ ಮಾಜಿ ಸಿಎಂ ಹೆಚ್ ಡಿಕೆ ಕುಮಾರಸ್ವಾಮಿ ಹೇಳಿದ್ದರು. ಹೀಗಾಗಿ, ಜೆಡಿಎಸ್ ಬಹುತೇಕ ಬಿಜೆಪಿ ಜೊತೆ ಸೇರಲಿದೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಈ ಬೆನ್ನಲ್ಲೇ ದೇವೇಗೌಡರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.