ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಉದಯನಿಧಿ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸುತ್ತಿಲ್ಲ: ಪ್ರಹ್ಲಾದ್ ಜೋಶಿ
ಸನಾತನ ಧರ್ಮದ ಬಗ್ಗೆ ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಮಾತಾಡಿದ್ದಾರೆ. ಅಚಾನಕ್ಕಾಗಿ ಅವರು ಹೇಳಿಕೆ ಕೊಟ್ಟಿಲ್ಲ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಹೇಳಿಕೆಯನ್ನು ಖಂಡಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿ : ಸನಾತನ ಧರ್ಮದ ಬಗ್ಗೆ ತಮಿಳುನಾಡು ಮಂತ್ರಿ ಉದಯನಿಧಿ ಸ್ಟಾಲಿನ್ ಅವಹೇಳನಕಾರಿ ಮಾತಾಡಿದ್ದಾರೆ. ಅಚಾನಕ್ಕಾಗಿ ಅವರು ಹೇಳಿಕೆ ಕೊಟ್ಟಿಲ್ಲ. ಸನಾತನ ಧರ್ಮದ ವಿರುದ್ಧವಾಗಿಯೇ ಅಲ್ಲಿ ಕಾನ್ಫರೆನ್ಸ್ ಮಾಡಲಾಗಿತ್ತು. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಹೇಳಿಕೆಯನ್ನು ಖಂಡಿಸುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಸುದ್ದಿಗಾರರೊದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪುತ್ರ ಸಚಿವ ಪ್ರಿಯಾಂಕ್ ಖರ್ಗೆ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಸಚಿವ ಸತೀಶ್ ಜಾರಕಿಹೊಳಿ ಹಿಂದೂ ಎಂಬ ಪದ ಅಶ್ಲೀಲ ಎಂದು ಹೇಳಿದ್ದರು. ಬಿಹಾರದ ಶಿಕ್ಷಣ ಸಚಿವರು ರಾಮಚರಿತಮಾನಸ ಕೀಳಾಗಿ ಹೀಯಾಳಿಸಿದ್ದರು. ಎಐಸಿಸಿ ನಾಯಕ ರಾಹುಲ್ ಗಾಂಧಿ ಅಮೆರಿಕದಲ್ಲಿ ಹೋಗಿ ಮುಸ್ಲಿಂ ಲೀಗ್ ಸೆಕ್ಯುಲರ್ ಪಾರ್ಟಿ ಎಂದು ಹೇಳಿದ್ದರು.
ಇದೇ ಮುಸ್ಲಿಂ ಲೀಗ್‌ನಿಂದ ದೇಶ ವಿಭಜನೆಯಾಗಿದೆ. ಅಲ್ಲದೇ, ಈ ಲೀಗ್ನ ಡೈರೆಕ್ಟ್ ಆಕ್ಟ್ನಿಂದ 1946 ಜನವರಿ ತಿಂಗಳಲ್ಲಿ ಕಲ್ಕತ್ತದಲ್ಲಿ 1500ಕ್ಕೂ ಹೆಚ್ಚು ಹಿಂದೂಗಳ ನರಮೇಧವಾಗಿದೆ. ಇವತ್ತಿಗೂ ಚುನಾವಣೆ ಹತ್ತಿರ ಬಂದಾಗ ಪಾರ್ಟ್ ಟೈಮ್ ಹಿಂದೂ ರೀತಿಯಲ್ಲಿ ವರ್ತಿಸುವ ಕಾಂಗ್ರೆಸ್ ಈ ಹೇಳಿಕೆ ಖಂಡಿಸಿಲು ತಯಾರಿಲ್ಲ. ಘಮಂಡಿಯಾ ಘಟಬಂಧನ ಉಳಿಸಿಕೊಳ್ಳುವ ಆತುರದಲ್ಲಿ ಹೇಳಿಕೆಯನ್ನು ಖಂಡಿಸಿಲ್ಲ. ಸುತ್ತು ಬಳಸಿ ಎಲ್ಲ ಸರ್ವಧರ್ಮ ನಂಬುತ್ತೇವೆ ಎಂದು ಹೇಳುತ್ತಿದ್ದಾರೆ. ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ನಿಲುವು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಡಿಸಿಎಂ ಡಿ.ಕೆ. ಶಿವಕುಮಾರ್ ದೇವಸ್ಥಾನಕ್ಕೆ ಹೋಗುತ್ತಾರೆ ಈ ಬಗ್ಗೆ ಅವರ ನಿಲುವೇನು..? ಡಿಎಂಕೆ ಹೇಳಿಕೆ ಖಂಡಿಸಲು ನಿಮಗೆ ಶಕ್ತಿಯಿಲ್ಲ. ದೇಶದ ಸಂಸ್ಕೃತಿ, ನಂಬಿಕೆ, ಸಮಗ್ರತೆ ಏನಾದರೂ ಆಗಲಿ. ಸಚಿವ ಪ್ರಿಯಾಂಕ್ ಖರ್ಗೆಯವರೂ ಉದಯನಿಧಿಯವರಿಗೆ ಬೆಂಬಲ ನೀಡಿದ್ದು, ಇದು ಕಾಂಗ್ರೆಸ್ ನಾಯಕರ ನಿಜಬಣ್ಣವನ್ನು ತೋರಿಸುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ತುಷ್ಟೀಕರಣದ ರಾಜಕೀಯದ ಹಾದಿ ತಲುಪಿದೆ. ಕಾಂಗ್ರೆಸ್ ಪಕ್ಷ ಇದರ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು ಪ್ರಹ್ಲಾದ್ ಜೋಶಿ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


