ಇಬ್ಬರು ದುರ್ಬಲರಿಂದ ಮೈತ್ರಿ: ಜೆಡಿಎಸ್-ಬಿಜೆಪಿ ಹೊಂದಾಣಿಕೆ ಕುರಿತು ಜಗದೀಶ್ ಶೆಟ್ಟರ್ ವ್ಯಂಗ್ಯ
ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ .

ಹುಬ್ಬಳ್ಳಿ: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು, ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ವಿಧಾನಸಭೆ ಚುನಾವಣೆಯಲ್ಲಿ ಇಬ್ಬರು ಪರಸ್ಪರ ಫೈಟ್ ಮಾಡಿದ್ದರು. ಈಗ ಮತ್ತೆ ಮೈತ್ರಿ ವಿಚಾರ ಮಾತಾಡುತ್ತಿದ್ದಾರೆ ಎಂದು ಹೇಳುವ ವ್ಯಂಗ್ಯ ವಾಡಿದ್ದಾರೆ.
ಎರಡೂ ಪಕ್ಷಗಳ ನಡುವೆ ಪೈಪೋಟಿ ಇತ್ತು. ಈಗ ಸ್ವಯಂ ಅನುಕೂಲಕ್ಕೆ ಮೈತ್ರಿ ಮಾಡಿಕೊಳ್ಳುತ್ತಿವೆ. ಆ ಪಕ್ಷಗಳ ಮೇಲೆ ಜನರಿಗೆ ವಿಶ್ವಾಸ ಮತ್ತು ನಂಬಿಕೆ ಹೋಗಿದೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಬಲಗೊಂಡಿದೆ. ಅದಕ್ಕಾಗಿ ಹಲವು ನಾಯಕರು ಬರಲು ಸಿದ್ಧರಾಗಿದ್ದಾರೆ. ಯಾರೆಲ್ಲ ಸೇರ್ಪಡೆ ಆಗುವರು ಎಂಬುದನ್ನು ಈಗಲೇ ಹೇಳಲು ಆಗುವುದಿಲ್ಲ. ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇತರ ರಾಜ್ಯಗಳಲ್ಲೂ ಕಾಂಗ್ರೆಸ್ ಬಲಗೊಳ್ಳುತ್ತಿದೆ’ ಎಂದರು.
ಮೈತ್ರಿ ವಿಚಾರದಲ್ಲಿ ಬಿಜೆಪಿ ಯಾವಾಗಲೂ ದ್ವಂದ್ವ ನಿಲುವು ಅನುಸರಿಸುತ್ತೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ ಅಂತ ಆರೋಪ ಮಾಡಿದರು. ಒಂದೇ ತಿಂಗಳಲ್ಲಿ ಅವರನ್ನು ಬಿಜೆಪಿ ಮೈತ್ರಿ ಸರ್ಕಾರದಲ್ಲಿ ಸೇರಿಸಿಕೊಂಡರು.
ರಾಜಕೀಯ ಪಕ್ಷಕ್ಕೆ ಗಟ್ಟಿ ನಿರ್ಧಾರಗಳು ಇರಬೇಕು. ಇವತ್ತು ಟೀಕೆ ಮಾಡೋದು, ನಾಳೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಏನರ್ಥವಿದೆ. ಮೈತ್ರಿ ಮಾಡಿಕೊಳ್ಳುವುದು ಅವರಿಗೆ ಬಿಟ್ಟದ್ದು. ಆದರೆ ಬಿಜೆಪಿಯವರು ಬಂದ ಪಕ್ಷಗಳನ್ನು ಸರಿಯಾಗಿ ನಡೆಸಿಕೊಳ್ಳಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


