ಬಿಜೆಪಿ- ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಸಮಸ್ಯೆ ಬಗೆಹರಿಸುತ್ತೇವೆ- ಎಚ್ ಡಿ ಕುಮಾರಸ್ವಾಮಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಯ ಮಾತುಗಳು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೈತ್ರಿ ಕುರಿತು ಭಾನುವಾರ ಸ್ಪಷ್ಪನೆ ನೀಡಿದ್ದಾರೆ.
ನಿನ್ನೆ ಲೋಕಸಭೆ ಚುನಾವಣೆಗೆ ಮೈತ್ರಿ ಬಗ್ಗೆ ಈ ಹಂತದಲ್ಲಿ ಏನನ್ನೂ ಹೇಳುವುದಿಲ್ಲ, ಇನ್ನೂ ಸಮಯವಿದೆ ಎಂದಿದ್ದ ಕುಮಾರಸ್ವಾಮಿ, ಇಂದು ಸೀಟು ಹಂಚಿಕೆ ವಿಚಾರ ಕುರಿತು ಮಾತನಾಡಿದ್ದಾರೆ. ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸೀಟು ಹಂಚಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುತ್ತೇವೆ. ಪ್ರಸ್ತುತ ರಾಜ್ಯ ಸರ್ಕಾರ ಹೇಗೆ ನಡೆಯುತ್ತಿದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವುದೇ ನಮ್ಮ ಗುರಿ ಎಂದರು.
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್‌ನೊಂದಿಗೆ ಮೈತ್ರಿ ಕುರಿತು ನವದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹಾಗೂ ಜೆಡಿಎಸ್ ವರಿಷ್ಠ ಹೆಚ್. ಡಿ. ದೇವೇಗೌಡ ಅವರೊಂದಿಗೆ ಮಾತುಕತೆ ನಡೆದಿದೆ ಎನ್ನುವ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಶುಕ್ರವಾರ ಬಹಿರಂಗ ಮಾಡಿದ್ದರು. ಅಲ್ಲದೇ, ಈ ಮೈತ್ರಿಯಿಂದ ರಾಜ್ಯದಲ್ಲಿ ಬಿಜೆಪಿ ಬಲಗೊಳ್ಳಲಿದೆ ಎಂದು ಅವರು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


