'ಜೆಡಿಎಸ್ ಜೊತೆ ಇನ್ನೂ ಮೈತ್ರಿ ಒಪ್ಪಂದ ಅಂತಿಮವಾಗಿಲ್ಲ': ಬಿಎಸ್ ಯಡಿಯೂರಪ್ಪ ಯೂಟರ್ನ್
ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಜೆಡಿಎಸ್ ಜೊತೆ ಮೈತ್ರಿಗೆ ಹೈಕಮಾಂಡ್ ಒಲವು ತೋರಿಸಿದ್ದು, ಮೈತ್ರಿ ಮಾಡಿಕೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಮಾಹಿತಿ ರವಾನಿಸಿದ್ದು, JDS ಜೊತೆಗಿನ ಮೈತ್ರಿ ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದು ಖುದ್ದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ತಮ್ಮ ಹೇಳಿಕೆಯಿಂದ ದಿಡೀರ್ ಯೂಟರ್ನ್ ಹೊಡೆದಿರುವ ಅವರು, ಸದ್ಯಕ್ಕೆ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಸಿಯಾಗಿದ್ದಾರೆ. ಬಹುಶಃ ನಾಳೆ ಅಥವಾ ನಾಡಿದ್ದು ನಂತರ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ. ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಇದನ್ನೂ ಓದಿ: ಯಾರಿಗೂ ಯಾರು ಅನಿವಾರ್ಯವಲ್ಲ; ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಇನ್ನೂ ಸಮಯವಿದೆ: ಕುಮಾರಸ್ವಾಮಿ ವ್ಯತಿರಿಕ್ತ ಹೇಳಿಕೆ!
ಇದೇ ವೇಳೆ JDS ಬಿಜೆಪಿಯ ಬಿ ಟೀಂ ಎನ್ನುವುದು ನಿಜವಾಯ್ತು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಾನು ಮಾತಾಡಲು ಹೋಗಲ್ಲ. ಅಮಿತ್ ಶಾ ಜೊತೆ ನಾನು ಇನ್ನೂ ಮಾತಾಡಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


