ಬಿಜೆಪಿ, ಜೆಡಿಎಸ್ ಮೈತ್ರಿ ಖಚಿತ: ಕೆಎಸ್ ಈಶ್ವರಪ್ಪ
ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಖಚಿತ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ನಗರದ ಸಣ್ಣ ಮಾರುಕಟ್ಟೆ ಪ್ರದೇಶದ ಕುಟುಂಬದ ಆರಾಧ್ಯ ದೈವ ಮಲ್ಲೇಶ್ವರ ಹಾಗೂ ಚೌಡೇಶ್ವರಿ ದೇವಿಗೆ ವಿಶೇಷ ಹೋಮ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ಹೊತ್ತಿನ ಮುನ್ನ ಹೆಚ್.ಡಿ. ಕುಮಾರ ಸ್ವಾಮಿ ಅವರು ಪೋನ್ ಮಾಡಿ ಮೈತ್ರಿ ಬಗ್ಗೆ ಮಾತನಾಡಿದ್ದಾರೆ.
ಇದು ಮುಂದಿನ ಚುನಾವಣೆಗೆ ಶುಭ ಸಂದೇಶವಾಗಿದೆ. ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಏನು ಹೊಸದಾಗಿ ಆಗಿಲ್ಲ. ಈ ಹಿಂದೆ ಕೂಡಾ ಒಂದಾಗಿದ್ದೆವು, ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಒಳ್ಳೆಯ ಸರ್ಕಾರ ನೀಡಿದ್ದೆವು. ಕಾಂಗ್ರೆಸ್ ದೂರ ಇಡಬೇಕು ಎನ್ನುವ ಕಾರಣಕ್ಕಾಗಿ ನಾವು ಮೈತ್ರಿ ಮಾಡಿ ಕೊಂಡಿದ್ದೇವೆ.
ದೇಶದಲ್ಲಿ ಕಾಂಗ್ರೆಸ್ ದೂರ ಇಟ್ಟು ಎಲ್ಲರೂ ಒಂದಾಗಬೇಕು. ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ ದೇಶವನ್ನು ಲೂಟಿ ಮಾಡಿದೆ. ಕಾಂಗ್ರೆಸ್ಸೇತರ ಮತಗಳ ಒಂದಾಗಬೇಕಿದೆ, ಬಿಜೆಪಿ ಜೆಡಿಎಸ್ ಒಂದಾಗುತ್ತಿದೆ ಎಂದು ಸಮರ್ಥಿಸಿಕೊಂಡರು.
ಹಾವೇರಿ ಲೋಕಸಭಾ ಸ್ಪರ್ಧೆ:
ನನಗೆ ಚುನಾವಣಾ ಪ್ರಕ್ರಿಯೆಯಿಂದ ದೂರ ಇರುವಂತೆ ಸೂಚನೆ ಬಂದಿದೆ. ನನ್ನ ಮಗ ಕಾಂತೇಶ್ ಹಾವೇರಿಯಲ್ಲಿ ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದಾನೆ. ಮಠ ಮಂದಿರಗಳಿಗೆ ಭೇಟಿ ನೀಡಿ ಓಡಾಡುತ್ತಿದ್ದಾನೆ. ಜನರ ಆಶೀರ್ವಾದ ಕೇಳುತ್ತಿದ್ದಾನೆ. ಪಕ್ಷ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತಾನೆ. ಇಲ್ಲವಾದರೆ ಪಕ್ಷ ಯಾರಿಗೆ ಟಿಕೆಟ್ ಕೊಡುತ್ತದೆ ಅವರನ್ನು ಗೆಲ್ಲಿಸುವ ಕೆಲಸ ಮಾಡುತ್ತಾನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


