ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ: ಜೆಡಿಎಸ್ ಹೆಸರನ್ನು 'ಕಮಲ ದಳ'ವೆಂದು ಬದಲಿಸಿದರೆ ಒಳಿತು!
ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಬೆಂಗಳೂರು: ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ. ಮುಳುಗುವವರು ಹುಲ್ಲು ಕಡ್ಡಿಯ ಆಸರೆಯನ್ನಾದರೂ ಪಡೆಯಬೇಕು, ಅದು ಬಿಟ್ಟು ಮತ್ತೊಬ್ಬ ಮುಳುಗುತ್ತಿರುವವರ ಆಸರೆ ಪಡೆದರೆ ಬದುಕಲು ಸಾಧ್ಯವೇ ಎಂದು ಪ್ರಶ್ನಿಸಿದೆ.
ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು, ಆದರೆ ಈಗ "ಜಾತ್ಯಾತೀತತೆ"ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು "ಕಮಲ ದಳ" ಎಂದು ಬದಲಿಸಿಕೊಂಡರೆ ಒಳಿತು ಎಂದು ಕಾಂಗ್ರೆಸ್ ಸಲಹೆ ನೀಡಿದೆ. ಇತ್ತ ಬಿಜೆಪಿ ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು, ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಟೀಕಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


