ಜನತಾ ದಳ ಎಂಬ ಹೆಸರನ್ನು 'ಕಮಲ ದಳ' ಎಂದು ಬದಲಿಸಿ ಎಂದ ಕಾಂಗ್ರೆಸ್; ಜೆಡಿಎಸ್ ತಿರುಗೇಟು, ಎಚ್‌ಡಿ ಕುಮಾರಸ್ವಾಮಿ ಕಿಡಿ
ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ವಿಚಾರವಾಗಿ ಜೆಡಿಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿವೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ವಿಚಾರವಾಗಿ ಜೆಡಿಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿವೆ.
'ಚುನಾವಣೆಯಲ್ಲಿ ಸೋತರೆ ಪಕ್ಷ ವಿಸರ್ಜಿಸುತ್ತೇನೆ ಎಂದಿದ್ದರು. ಆದರೆ, ಈಗ 'ಜಾತ್ಯಾತೀತತೆ'ಯನ್ನು ವಿಸರ್ಜಿಸಲು ಹೊರಟಿದ್ದಾರೆ. ಜನತಾ ದಳ ಎಂಬ ಹೆಸರನ್ನು 'ಕಮಲ ದಳ' ಎಂದು ಬದಲಿಸಿಕೊಂಡರೆ ಒಳಿತು!' ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಬಿಜೆಪಿ ವಿರುದ್ಧವೂ ಕಿಡಿಕಾರಿರುವ ಕಾಂಗ್ರೆಸ್, ಇತ್ತ ಬಿಜೆಪಿಯು ಜೆಡಿಎಸ್ ಪಕ್ಷವನ್ನು ಫ್ಯಾಮಿಲಿ ಪಾರ್ಟಿ ಎಂದು ಟೀಕಿಸುತ್ತಿತ್ತು. ಈಗ ಅದೇ ಫ್ಯಾಮಿಲಿಗೆ ನಾಲ್ಕು ಸೀಟು ಬಿಟ್ಟು ಕೊಟ್ಟು ಹೊಂದಾಣಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡು ಅಲ್ಲವೇ ಎಂದು ಪ್ರಶ್ನಿಸಿದೆ.
'ಜೆಡಿಎಸ್-ಬಿಜೆಪಿ ಮೈತ್ರಿ ಮಾತು ಕೇಳಿ ಮತಿಗೆಟ್ಟು ಕೂತ ಕಾಂಗ್ರೆಸ್, ಲೋಕಸಭೆ ಚುನಾವಣೆಯಲ್ಲಿ ಸಿಂಗಲ್ ಸೀಟಿಗೂ ದಿಕ್ಕಿಲ್ಲದ ಸ್ಥಿತಿ ನೆನೆದು ಕೈ ಕೈ ಪರಚಿಕೊಳ್ಳುತ್ತಿದೆ. ಪಕ್ಷ ವಿಸರ್ಜನೆ ಬಗ್ಗೆ ಕುಮಾರಸ್ವಾಮಿ ಅವರು ನೀಡಿದ್ದ ಹೇಳಿಕೆಯನ್ನೇ ತಿರುಚುತ್ತಿರುವ ಕೂಗುಮಾರಿ, ಈಗ ಮಾರಿ ಉಳಿಸಿಕೊಳ್ಳಲು ಸತ್ಯ ತಿರುಚುತ್ತಿದೆ' ಎಂದು ಜೆಡಿಎಸ್ ತಿರುಗೇಟು ನೀಡಿದೆ.
ಇದೇ ವೇಳೆ, ಟ್ಯಾಕ್ಸಿ, ಆಟೋರಿಕ್ಷಾ ಚಾಲಕರು ಸೇರಿದಂತೆ ಒಂದು ವರ್ಗದ ಜನರ ಮೇಲೆ ಕಾಂಗ್ರೆಸ್ ಸರ್ಕಾರದ ಖಾತರಿಗಳು ನಕಾರಾತ್ಮಕ ಪರಿಣಾಮ ಬೀರುತ್ತಿವೆ ಎಂದು ಕುಮಾರಸ್ವಾಮಿ ಆರೋಪಿಸಿದರು.
'ರಾಜ್ಯ ಕಾಂಗ್ರೆಸ್ ಸರ್ಕಾರದ ಖಾತರಿಗಳ 'ಅಡ್ಡಪರಿಣಾಮ'ದ ತೀವ್ರತೆಯು ಜನರನ್ನು ಬಾಧಿಸುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿ ಅಸಮಾನತೆ ಮತ್ತು ಪಕ್ಷಪಾತವು ಅರಾಜಕತೆಯನ್ನು ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇಂದು ಖಾಸಗಿ ಸಂಚಾರ ವ್ಯವಸ್ಥೆ ನಾಶವಾಗಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರತಿಷ್ಠೆಯನ್ನು ಬದಿಗಿಟ್ಟು ಖಾಸಗಿ ಸಾರಿಗೆ ಸಂಸ್ಥೆಗಳ ಬೇಡಿಕೆಗಳನ್ನು ಸರ್ಕಾರ ಮಾನವೀಯತೆಯಿಂದ ಪರಿಗಣಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


