ಕಾಂಗ್ರೆಸ್ ಸರ್ಕಾರಕ್ಕೆ ತಿಂಗಳು ಮೂರು; ಒಳಜಗಳ ನೂರಾರು; ಅನ್ನದಾತನಿಗೆ ಆತ್ಮಹತ್ಯೆ ಗ್ಯಾರಂಟಿ!
ಇದು ಯಾರು ಬರೆದ ಕಥೆಯೋ, ನಮಗಾಗಿ ಬಂದ ವ್ಯಥೆಯೋ ಎಂಬಂತಾಗಿದೆ ಅನ್ನದಾತರ ಬದುಕು, ರಾಜ್ಯದಲ್ಲಿ ದಿನನಿತ್ಯ ರೈತರು ನೇಣಿನ ಕುಣಿಕೆಗೆ ಕೊರಳಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಬೆಂಗಳೂರು: ಇದು ಯಾರು ಬರೆದ ಕಥೆಯೋ, ನಮಗಾಗಿ ಬಂದ ವ್ಯಥೆಯೋ ಎಂಬಂತಾಗಿದೆ ಅನ್ನದಾತರ ಬದುಕು, ರಾಜ್ಯದಲ್ಲಿ ದಿನನಿತ್ಯ ರೈತರು ನೇಣಿನ ಕುಣಿಕೆಗೆ ಕೊರಳಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, 2013 ರಿಂದ 2018ರ ಸಿದ್ದರಾಮಯ್ಯರ ಮೊದಲ ಅವಧಿಯಲ್ಲಿ ಬರೊಬ್ಬರಿ 4,257 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈಗಾಗಲೇ 150ರ ಗಡಿ ದಾಟಿದೆ
ಸಿದ್ದರಾಮಯ್ಯ ಅವರೇ, ತಮ್ಮ ಅವಧಿಯಲ್ಲಿ ಅತಿಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರು ಎಂಬ ರಕ್ಕಸ ಇತಿಹಾಸವನ್ನು ತಾವು ಬರೆಯುತ್ತಿದ್ದೀರಿ ಎಂದು ಹೇಳಿದೆ.
ರಾಜ್ಯದಲ್ಲಿ ತಾಂಡವವಾಡುತ್ತಿರುವ ವರ್ಗಾವಣೆ ದಂಧೆ ಕಾನೂನು ಸುವ್ಯವಸ್ಥೆಯನ್ನೂ ಹಳ್ಳ ಹಿಡಿಸಿದೆ. ಶ್ಯಾಡೋ ಸಿಎಂ ಹಾಗೂ ಗೃಹ ಸಚಿವ ಡಾ.ಪರಮೇಶ್ವರ ಅವರ ನಡುವಿನ ಮುಸುಕಿನ ಗುದ್ದಾಟದಿಂದಾಗಿ 115 ಪೊಲೀಸ್ ಅಧಿಕಾರಿಗಳು ಎಲ್ಲಿಯೂ ನಿಯುಕ್ತಗೊಳ್ಳದೆ ಅತಂತ್ರರಾಗಿದ್ದಾರೆ.
ಇಷ್ಟೇ ಅಲ್ಲದೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಬಿಜೆಪಿ ಸರ್ಕಾರ ಜಾರಿಗೆ ತಂದ ಪೋರ್ಟಲ್ ವ್ಯವಸ್ಥೆಯನ್ನೂ ಹದಗೆಡಿಸಿರುವ ಸಿದ್ದರಾಮಯ್ಯ ಅವರ ಸರ್ಕಾರ ಸುಮಾರು 4,000 ಕಾನ್ಸ್ಟೇಬಲ್‌ಗಳನ್ನೂ ತ್ರಿಶಂಕು ಸ್ಥಿತಿಗೆ ತಳ್ಳಿದೆ. ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣ ಹದಗೆಡಿಸಿ @INCKarnataka ತನ್ನ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಲೇವಡಿ ಮಾಡಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರದ ಶಾಸಕರು, ಸಚಿವರುಗಳ ಒಳಜಗಳ ಮಾತ್ರ ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯದ ಅಭಿವೃದ್ಧಿಗಿಂತ, ಅಧಿಕಾರಕ್ಕಾಗಿ ಕಚ್ಚಾಡುವುದನ್ನೇ ಮೊದಲ ಆದ್ಯತೆಯನ್ನಾಗಿಸಿಕೊಂಡು, ರಾಜ್ಯದ ಅಭಿವೃದ್ಧಿಯನ್ನು ಕೈ ಸರ್ಕಾರ ರಿವರ್ಸ್ ಗೇರ್‌ನಲ್ಲಿರಿಸಿದೆ. ರಾಜ್ಯಾದ್ಯಂತ ಬರ ತಾಂಡವವಾಡುತ್ತಿದೆ. ದುಂದು ವೆಚ್ಚವನ್ನು ಕಡಿತಗೊಳಿಸಿ, ಬರ ನಿರ್ವಹಣೆಗೆ ಪ್ರಾಶಸ್ತ್ಯ ನೀಡುವ ಬದಲು, ಹೊಸ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಿ ಎಂದು ಕಚ್ಚಾಡುವುದು, ರಾಜ್ಯದ ಜನತೆಗೆ ಮಾಡುತ್ತಿರುವ ಮಹಾದ್ರೋಹ ಎಂದು ಟ್ವೀಟ್ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


