ಇನ್ನೂ ಮೂರು ಡಿಸಿಎಂ ಸ್ಥಾನಗಳ ಸೃಷ್ಟಿಸಿ: 'ಕೈ' ಪಾಳಯದಲ್ಲಿ ಸಂಚಲನ ಸೃಷ್ಟಿಸಿದ ಸಚಿವ ರಾಜಣ್ಣ ಹೇಳಿಕೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಬಹಿರಂಗ ಹೇಳಿಕೆಗಳು ರಾಜ್ಯ ಸರ್ಕಾರವನ್ನು ಮುಜುಗೊರಕ್ಕೊಳಗಾಗುವಂತೆ ಮಾಡುತ್ತಿದ್ದು, ಇದರ ನಡುವಲ್ಲೇ ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಕೈ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ಬಹಿರಂಗ ಹೇಳಿಕೆಗಳು ರಾಜ್ಯ ಸರ್ಕಾರವನ್ನು ಮುಜುಗೊರಕ್ಕೊಳಗಾಗುವಂತೆ ಮಾಡುತ್ತಿದ್ದು, ಇದರ ನಡುವಲ್ಲೇ ಸಚಿವ ಕೆ.ಎನ್.ರಾಜಣ್ಣ ಅವರು ನೀಡಿರುವ ಹೇಳಿಕೆಯೊಂದು ಕೈ ಪಾಳಯದಲ್ಲಿ ಸಂಚಲನವನ್ನು ಸೃಷ್ಟಿಸಿದೆ.
ಡಿ.ಕೆ. ಶಿವಕುಮಾರ್ ಜತೆಗೆ ಇನ್ನೂ ಮೂರು ಮಂದಿ ಉಪಮುಖ್ಯಮಂತ್ರಿಗಳನ್ನು ನೇಮಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆಂದು ಸಚಿವ ರಾಜಣ್ಣ ಅವರು ಹೇಳಿದ್ದಾರೆ.
ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಇನ್ನೂ ಮೂರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಸಲಹೆ ನೀಡಲು ನಿರ್ಧರಿಸಿದ್ದೇನೆ. ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಬರಲು ಎಸ್ಸಿ-ಎಸ್ಟಿ ಹಾಗೂ ಅಲ್ಪಸಂಖ್ಯಾತರು, ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಬೆಂಬಲಿಸಿರುವುದು ಸಹ ಕಾರಣ. ಹೀಗಾಗಿ ಆ ಸಮುದಾಯಗಳಿಗೂ ಆದ್ಯತೆ ನೀಡಿದರೆ ಪಕ್ಷಕ್ಕೆ ಅನುಕೂಲವಾಗಲಿದೆ ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿದರು.
ಪ್ರಸ್ತುತ ಹಿಂದುಳಿದ ವರ್ಗದ ಮುಖ್ಯಮಂತ್ರಿ (ಸಿದ್ದರಾಮಯ್ಯ), ಮುಂದುವರೆದ ವರ್ಗದ ಉಪಮುಖ್ಯಮಂತ್ರಿ (ಡಿ.ಕೆ. ಶಿವಕುಮಾರ್) ಇದ್ದಾರೆ. ಜೊತೆಗೆ ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರು, ವೀರಶೈವರಿಗೂ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು. ಈ ಬಗ್ಗೆ ಹೈಕಮಾಂಡ್ ಗಮನಕ್ಕೆ ತರಲು ನಿರ್ಧರಿಸಿದ್ದೇನೆ. ಈ ಬಗ್ಗೆ ಯಾರೊಂದಿಗೂ ಚರ್ಚಿಸಿಲ್ಲ. ಇನ್ನು ಮುಂದೆ ಪಕ್ಷದ ಹಿರಿಯ ನಾಯಕರೊಂದಿಗೂ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಜಾತಿವಾರು ಉಪಮುಖ್ಯಮಂತ್ರಿ ಹುದ್ದೆ ಕೋರುತ್ತಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿ, ಜಾತಿವಾರು ಹುದ್ದೆಯಲ್ಲ. ಎಸ್ಸಿ-ಎಸ್ಟಿ ಎಂದರೆ ಆ ಪ್ರವರ್ಗಗಳಲ್ಲಿ ನೂರಾರು ಜಾತಿಗಳಿವೆ. ಆ ಎಸ್ಸಿ-ಎಸ್ಟಿಯಲ್ಲಿ ಒಬ್ಬರಿಗೆ ಅವಕಾಶ ನೀಡಿ. ಅದೇ ರೀತಿ ಮೂರು ಉಪಮುಖ್ಯಮಂತ್ರಿ ಹುದ್ದೆ ಮಾಡಲಿ ಎಂಬುದು ನನ್ನ ಸಲಹೆ. ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೂ ಇಬ್ಬರು-ಮೂವರು ಉಪಮುಖ್ಯಮಂತ್ರಿ ಇರಲಿಲ್ಲವೇ? ನಮ್ಮಲ್ಲಿಯೂ ಇದ್ದರೆ ತಪ್ಪೇನು? ಇದು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ನೆರವಾಗಲಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


