ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ಇನ್ನೂ ಮುಗಿದಿಲ್ಲ: ಶಿವರಾಜ್ ತಂಗಡಗಿ
‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.

ಕೊಪ್ಪಳ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳೇ ಕಳೆದಿದ್ದರೂ, ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಬಿಜೆಪಿಗೆ ಕಗ್ಗಂಟಾಗಿಯೇ ಉಳಿದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.
‘ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಇಂತಿಷ್ಟು ಹಣವನ್ನು ನೀಡಬೇಕು ಎಂದು ಒಪ್ಪಂದ ಆಗಿದೆ. ಆದರೆ, ಆ ಹಣದ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ ಬಹುಕೋಟಿ ರೂಪಾಯಿ ಪಡೆದು, ವಂಚಿಸಿರುವ ಹಿಂದುತ್ವವಾದಿ ಚೈತ್ರಾ ಕುಂದಾಪುರ ವಿಚಾರ ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಶೇ 79 ರಷ್ಟು ಬಿಜೆಪಿಗಳು ಡೀಲ್ ಮಾಸ್ಟರ್‌ಗಳಾಗಿದ್ದಾರೆ ಎಂದು ಹೇಳಿದರು.
ಕನಕಗಿರಿ ಕ್ಷೇತ್ರದ ತಿಮ್ಮರೆಡ್ಡಿ ಗಿಲ್ಲೆಸೂಗೂರು ಅವರು ಸಹ ಬಿಜೆಪಿ ಟಿಕೆಟ್ ಪಡೆಯಲು 21 ಲಕ್ಷ ರೂ. ನೀಡಿರುವುದು ಮಾಧ್ಯಮಗಳ ವರದಿಯಿಂದ ಗೊತ್ತಾಗಿದೆ. ಬಿಜೆಪಿಯಲ್ಲಿ ಸಚಿವರಾಗಲು 60 ಕೋಟಿಯಿಂದ 70 ಕೋಟಿ ರೂ. ಕೊಡಬೇಕು. ಮುಖ್ಯಮಂತ್ರಿಯಾಗಲು 2 ಸಾವಿರ ಕೋಟಿ ನೀಡಬೇಕು ಎಂದು ಅವರದೇ ಪಕ್ಷದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಈ ಹಿಂದೆ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


