ರಾಜಕೀಯ

ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ, ಅಗತ್ಯಬಿದ್ದರೆ ದೇವೇಗೌಡ-ಪ್ರಧಾನಿ ಮೋದಿ ಭೇಟಿ: ಹೆಚ್ ಡಿ ಕುಮಾರಸ್ವಾಮಿ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ, ಅಗತ್ಯಬಿದ್ದರೆ ದೇವೇಗೌಡ-ಪ್ರಧಾನಿ ಮೋದಿ ಭೇಟಿ: ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
Published On :

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

ದೆಹಲಿಗೆ ಹೊರಡುವ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾತನಾಡುತ್ತೇನೆ. ಎಷ್ಟು ಸೀಟ್ ಅಂತಾ ನಾವು ಚರ್ಚಿಸಿಲ್ಲ, ಬಿಜೆಪಿಯೂ ಚಿಂತನೆ ಮಾಡಿಲ್ಲ. 28 ಕ್ಷೇತ್ರದ ಇಂದಿನ ಪರಿಸ್ಥಿತಿ ಅವಲೋಕಿಸಿ ಚರ್ಚೆ ಮಾಡುತ್ತೇವೆ. ಮೈತ್ರಿ ಇಂದು ಸಂಜೆ ಅಮಿತ್ ಶಾ, ಜೆಪಿ ನಡ್ಡಾ ಜೊತೆ ಚರ್ಚೆ ಮಾಡಿ ನಾಳೆ ನಿಮಗೆ ವಿವರವಾಗಿ ಹೇಳುತ್ತೇನೆ. ಅವಶ್ಯಕತೆ ಬಿದ್ದರೆ ಪ್ರಧಾನಿ ಮೋದಿ, ದೇವೇಗೌಡರು ಚರ್ಚಿಸುತ್ತಾರೆ ಎಂದರು.

ಲೋಕಸಭೆ ಚುನಾವಣೆ 2024ಕ್ಕೆ ಜೆಡಿಎಸ್ ನಾಲ್ಕು ಕ್ಷೇತ್ರಗಳ (ಮಂಡ್ಯ, ಹಾಸನ, ಕೋಲಾರ, ತುಮಕೂರು) ಬೇಡಿಕೆ ಮುಂದಿಟ್ಟಿದೆ. ತುಮಕೂರು ಲೋಕಸಭಾ ಕ್ಷೇತ್ರದ ವಿಚಾರ ಇನ್ನೂ ಅಂತಿಮವಾಗಿಲ್ಲ. ಇಂದಿನ ಚರ್ಚೆ ವೇಳೆ ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಆಗುವ ಸಾಧ್ಯತೆ ಇದೆ. ನಾಳೆ ಅಥವಾ ನಾಡಿದ್ದು ಉಭಯ ಪಕ್ಷಗಳಿಂದ ಜಂಟಿ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.

ಇನ್ನು ಕಾವೇರಿ ಜಲ ವಿವಾದ ವಿಚಾರವಾಗಿ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಸುಪ್ರೀಂ ಕೋರ್ಟ್ ಆದೇಶಕ್ಕಾಗಿ ನಾವು ಕಾಯುತ್ತಿದ್ದೇವೆ. ಕೇಂದ್ರದ ಜಲ ಸಂಪನ್ಮೂಲ ಸಚಿವರನ್ನು ಭೇಟಿಯಾಗಲು ರಾಜ್ಯ ನಾಯಕರು ಹೋಗಿದ್ದಾರೆ. ಕಾವೇರಿ ನೀರು ಪ್ರಾಧಿಕಾರ ಹೇಳಿರುವುದಕ್ಕೆ ತಮಿಳು ನಾಡಿಗೆ ನೀರು ಬಿಟ್ಟಿದ್ದೇವೆ ಎಂದು ಹೇಳಿರುವುದನ್ನು ಮಾಧ್ಯಮಗಳಲ್ಲಿ ನೋಡಿದೆ. ಸರ್ಕಾರ ನಾವು ನೀರು ಬಿಟ್ಟಿಲ್ಲ ಎಂದು ಜನರ ಹಾದಿ ತಪ್ಪಿಸುತ್ತಿದ್ದಾರೆ. ಕೋರ್ಟ್ ನಲ್ಲಿ ನೀರು ಬಿಟ್ಟಿದ್ದೇವೆ ಎನ್ನುತ್ತಿದ್ದಾರೆ. ಮುಂದೆ ಏನೇನು ಹೇಳುತ್ತಾರೋ ಕಾದು ನೋಡೋಣ ಎಂದರು.

ದೆಹಲಿಗೆ ಹೊರಟ ಸಾಹುಕಾರ್: ಕೆಂಪೇಗೌಡ ಏರ್ ಪೋರ್ಟ್ ನಿಂದ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಟ ಬೆನ್ನಲ್ಲೇ ಮಾಜಿ ಸಚಿವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಕೂಡ ದೆಹಲಿಗೆ ಹೊರಟಿರುವುದು ಕುತೂಹಲ ಮೂಡಿಸಿದೆ.ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತೀರ್ಪು ನೀಡಲು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.