ಕುತೂಹಲ ಕೆರಳಿಸಿದ ಮಾಜಿ ಪ್ರಧಾನಿ ದೇವೇಗೌಡ ಸುದ್ದಿಗೋಷ್ಠಿ: ದೆಹಲಿಯಲ್ಲಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ ಘೋಷಣೆ?
ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.

ನವದೆಹಲಿ/ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಇಂದು ಸುದ್ದಿಗೋಷ್ಠಿಯಲ್ಲಿ ಮೈತ್ರಿ ಕುರಿತು ಮತ್ತು ಎಷ್ಟು ಸೀಟುಗಳಲ್ಲಿ ಮೈತ್ರಿ ಮಾಡಿಕೊಳ್ಳಲಿವೆ ಎಂಬುದನ್ನು ದೇವೇಗೌಡರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಿನ್ನೆ ದೆಹಲಿಗೆ ಕುಮಾರಸ್ವಾಮಿ ಮತ್ತು ಹೆಚ್ ಡಿ ರೇವಣ್ಣ ಹಾಗೂ ಜೆಡಿಎಸ್ ನಾಯಕ ಕುಪೇಂದ್ರ ರೆಡ್ಡಿ ದೆಹಲಿಗೆ ಆಗಮಿಸಿದ್ದು ರಹಸ್ಯ ಸಭೆಗಳನ್ನು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ದೇವೇಗೌಡರ ನಿವಾಸಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಆಗಮಿಸಿ ಭೇಟಿ ನೀಡಿದ್ದು ಕೂಡ ಹಲವು ಕುತೂಹಲಕ್ಕೆ ಕಾರಣವಾಗಿದೆ.
ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಹೋದರ ರೇವಣ್ಣ, ಪ್ರಜ್ವಲ್ ರೇವಣ್ಣ, ನಿಖಿಲ್, ಸಾ.ರಾ.ಮಹೇಶ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಮಾಜಿ ಸಿಎಂ ಕುಮಾರಸ್ವಾಮಿ ದೋಸ್ತಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದೆ. ನಿನ್ನೆ ಮೈತ್ರಿ ಸಂಬಂಧ ದೆಹಲಿಯ ಸಫ್ದರ್ಜಂಗ್ ಲೇನ್ನಲ್ಲಿರುವ ದೇವೇಗೌಡರ ನಿವಾಸಲ್ಲಿ ಮಹತ್ವದ ಸಭೆ ನಡೆದಿದೆ.
ಕರ್ನಾಟಕದಲ್ಲಿ 6 ಲೋಕಸಭಾ ಕ್ಷೇತ್ರಗಳ ಮೇಲಿ ಕಣ್ಣಿಟ್ಟಿರುವ ಜೆಡಿಎಸ್ ನಾಲ್ಕು ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಡಲೇ ಬೇಕು ಎಂದು ಬಿಜೆಪಿ ಮುಂದೆ ಬೇಡಿಕೆ ಮುಂದಿಟ್ಟಿದೆ ಎನ್ನಲಾಗಿದೆ. ಮಂಡ್ಯ, ಹಾಸನ, ಕೋಲಾರ, ತುಮಕೂರು ಸೀಟ್ಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದ್ದು, ಈ ಪೈಕಿ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಇನ್ನೂ ಅಂತಿಮವಾಗಿಲ್ಲ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


