ರಾಜಕೀಯ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ: ಮಾಜಿ ಸಿಎಂ ಬೊಮ್ಮಾಯಿ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ: ಮಾಜಿ ಸಿಎಂ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Published On :

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ತೀವ್ರ ಇಕ್ಕಟ್ಟಿಗೆ ಸಿಲುಕಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರ್ಕಾರ ಸರಿಯಾಗಿ ವಾದ ಮಂಡಿಸಿಲ್ಲ. ನಮ್ಮ ಬಿಜೆಪಿ ವಕೀಲರು ಪ್ರೊಸಿಡಿಂಗ್ ನೋಡಿದ್ದಾರೆ. ಸರ್ಕಾರದ ಪರ ವಕೀಲರು ಸರಿಯಾಗಿ ವಾದ ಮಾಡಿಲ್ಲ ಎಂದು ಮಾಜಿ ಸಿಎಂ ಆರೋಪಿಸಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಟ್ರಿಬ್ಯುನಲ್ ನಾರ್ಮ್ಸ್ ಬಗ್ಗೆ ಸರಿಯಾಗಿ ಹೇಳಿಲ್ಲ. ತಮಿಳುನಾಡಿನಲ್ಲಿ ಎಷ್ಟು ನೀರು ಬಳಕೆಯಾಗಿದೆ ಅದನ್ನ ಹೇಳಿಲ್ಲ. ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕಿದೆ. ಅದನ್ನು ನಾವು ಮಾಡುತ್ತಿದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ಕಾವೇರಿ ನದಿ ನೀರಿನ ವಿಚಾರವಾಗಿ ಪ್ರತಿಭಟನೆ ನಡೆಸಲಾಗುವುದು. ಈಗಾಗಲೇ ಮಂಡ್ಯ, ಚಾಮರಾಜನಗರ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಮುಂದಿನ ಪ್ರತಿಭಟನೆ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಿದ್ದೇವೆ ಎಂದರು. .

ಈ ಪ್ರಕರಣದಲ್ಲಿ ವಕೀಲರು ಸರಿಯಾಗಿ ವಾದ ಮಂಡಿಸಿಲ್ಲ ಎಂಬ ಬೊಮ್ಮಾಯಿ ಹೇಳಿಕೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಈ ಹಿಂದೆ ಮಾಜಿ ಸಿಎಂಗಳಾದ ಎಚ್‌ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಅವರು ನೇಮಕ ಮಾಡಿಕೊಂಡಿದ್ದ ವಕೀಲರನ್ನೇ ನಾವು ನೇಮಿಸಿಕೊಂಡಿದ್ದೇವೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.