ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕಿದೆ, ಬೆಂಗಳೂರು ಬಂದ್ ಗೆ ನಮ್ಮ ಬೆಂಬಲ ಇದೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಕೊಟ್ಟರು.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಿನ್ನೆ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ಕೊಟ್ಟರು.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿ ಎಸ್ ಯಡಿಯೂರಪ್ಪ, ನಿಖಿಲ್ ಕುಮಾರಸ್ವಾಮಿ ಸೌಹಾರ್ದಯುತವಾಗಿ ಭೇಟಿ ಮಾಡಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಅವರೂ ಕರೆ ಮಾಡಿದ್ದರು. ಮನೆಗೆ ಬಂದು ಹೋಗಿ ಅಂದರು. ಸದ್ಯದಲ್ಲಿಯೇ ಹೋಗುತ್ತೇನೆ. ಹೇಗೊ ನಮ್ಮ ಜತೆ ಅವರು ಹೊಂದಾಣಿಕೆ ಆಗಿದ್ದಾರೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕಿದೆ. ಬೆಂಗಳೂರು ಬಂದ್ಗೆ ಬಿಜೆಪಿ ಬೆಂಬಲವೂ ಇದೆ. ಇದಕ್ಕೆ ನಮ್ಮದೇನೂ ವಿರೋಧ ಇರಲ್ಲ. ನಮ್ಮ ಸಂಪೂರ್ಣ ಬೆಂಬಲ ಇರುತ್ತದೆ ಎಂದರು.
ತಮ್ಮ ಭೇಟಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಯಡಿಯೂರಪ್ಪನವರ ಆಶೀರ್ವಾದ ಪಡೆಯಲು ಬಂದಿರುವುದಾಗಿ ಹೇಳಿದ್ದಾರೆ.
ಜೆಡಿಎಸ್ ಮತ್ತು ಬಿಜೆಪಿ ಎನ್ ಡಿಎ ಮೈತ್ರಿಕೂಟದ ಭಾಗವಾಗಿದೆ.ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಆಶೀರ್ವಾದ ಪಡೆಯಲು ನಾನು ಇಲ್ಲಿಗೆ ಬಂದಿದ್ದೇನೆ. ಅವರು ಎಲ್ಲರೊಂದಿಗೆ ಉತ್ತಮ ಒಡನಾಟ, ಬಾಂಧವ್ಯ ಹೊಂದಿದ್ದಾರೆ ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿ, ಇಂದು ಜನತಾದಳದ ಮುಸ್ಲಿಂ ಮುಖಂಡರ ಸಭೆ: ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮುಸ್ಲಿಂ ಜೆಡಿಎಸ್ ನಾಯಕರಲ್ಲಿ ಅಸಮಾಧಾನ ಸ್ಪೋಟವಾಗಿದೆ. ಮುಸ್ಲಿಂ ಮುಖಂಡರು ಸಾಮೂಹಿಕವಾಗಿ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ. ಅಸಮಾಧಾನ ಹಿನ್ನೆಲೆಯಲ್ಲಿ ಜೆಡಿಎಸ್ ಮುಸ್ಲಿಂ ಮುಖಂಡರು ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ 20 ಕ್ಕೂಹೆಚ್ಚು ಮುಖಂಡರು ಭಾಗಿಯಾಗಲಿದ್ದಾರೆ. ಸಭೆ ಮಾಡಿ ಜೆಡಿಎಸ್ ತೊರೆಯುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


