ಹಾಸನ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಸೋಮವಾರ ಬಿಡುಗಡೆ: ಹೆಚ್ ಡಿ ಕುಮಾರಸ್ವಾಮಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ -ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಂತೆ ಜೆಡಿಎಸ್ ಅಭ್ಯರ್ಥಿಗಳು ಯಾರ್ಯಾರು ಎಂಬುದು ಹಲವು ಕ್ಷೇತ್ರಗಳಲ್ಲಿ ಕುತೂಹಲಕರವಾಗಿರುತ್ತರೆ. ಇಂದು ಏಪ್ರಿಲ್ 1ರಂದು ಸಂಜೆ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ ಇಂದು ಜೆಡಿಎಸ್ ನಾಯಕ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳುವ ಪ್ರಕಾರ ಸೋಮವಾರ ಬೆಳಗ್ಗೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಗೊಂದಲದಲ್ಲಿರುವ ಹಾಸನ ಕ್ಷೇತ್ರ ಸೇರಿ ಉಳಿದ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮುಂದಿನ ಸೋಮವಾರ ಬೆಳಗ್ಗೆ ಬಿಡುಗಡೆ ಮಾಡುತ್ತೇವೆ. ಹಾಸನ ಕ್ಷೇತ್ರದ ಬಂಡಾಯಕ್ಕೆ ಸೊಪ್ಪು ಹಾಕುವ ಪ್ರಶ್ನೆಯೇ ಇಲ್ಲ, ನಮ್ಮ ಪಕ್ಷದಲ್ಲಿ ಕಾರ್ಯಕರ್ತರ ಭಾವನೆಗಳು ಮುಖ್ಯ, ಕಾರ್ಯಕರ್ತರಿಗೆ ಯಾವುದೇ ರೀತಿಯಲ್ಲಿ ನೋವುಂಟುಮಾಡುವುದಿಲ್ಲ ಎಂದಿದ್ದಾರೆ.
ಇಂದಿನಿಂದ ವಿವಿಧೆಡೆ ಪ್ರಚಾರ: ಇಂದಿನಿಂದ ವಿವಿಧ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯ ನಡೆಸಲಾಗುವುದು. ಚಾಮರಾಜನಗರ, ಮೈಸೂರು, ಬಳ್ಳಾರಿ, ಹುಬ್ಬಳ್ಳಿ, ಧಾರವಾಡದಲ್ಲಿ ಏಪ್ರಿಲ್ 12ರವರೆಗೆ ಪ್ರಚಾರ ನಡೆಸಲಾಗುವುದು. ಏಪ್ರಿಲ್ 13ರಿಂದ ಏಪ್ರಿಲ್ 20ರವರೆಗೆ ನಾಮಪತ್ರ ಸಲ್ಲಿಕೆಗೆ ಹಲವು ಕ್ಷೇತ್ರಗಳಿಗೆ ಭೇಟಿ ನೀಡಲಾಗುವುದು. ಏಪ್ರಿಲ್ 21ರಿಂದ ಏಪ್ರಿಲ್ 24ರವರೆಗೆ ರಾಮನಗರ, ಚನ್ನಪಟ್ಟಣ, ಕನಕಪುರದಲ್ಲಿ ಪ್ರಚಾರ ಮಾಡುತ್ತೇನೆ. ಎಲ್ಲಿಯೂ ಸಮಯ ವ್ಯರ್ಥ ಮಾಡುವುದಿಲ್ಲ. ಇನ್ನು, ಸಮೀಕ್ಷೆ ವರದಿಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಗುರಿ ತಲುಪುವುದಕ್ಕೆ ಬೇಕಾದ ಕೆಲಸ ಮಾಡುತ್ತೇವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


