ರಾಜಕೀಯ

420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!

ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ.

420 ಬೊಮ್ಮಾಯಿ ಸರ್ಕಾರ: ಸುರ್ಜೇವಾಲ ಹೇಳಿಕೆಗೆ ಸಿಎಂ ತಿರುಗೇಟು!
ಸಿಎಂ ಬೊಮ್ಮಾಯಿ, ರಣದೀಪ್ ಸುರ್ಜೇವಾಲ
Published On :

ಬೆಂಗಳೂರು: ಮೀಸಲಾತಿ ಕುರಿತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೀಸಲಾತಿ ನೀಡಿರುವುದಕ್ಕೆ ಕಾಂಗ್ರೆಸ್ ನಾಯಕರು ಅಕ್ರಮ, ಸಂವಿಧಾನ ವಿರೋಧಿ ಪದ ಬಳಸಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ವಕ್ತಾರ ಮತ್ತು ರಾಜ್ಯ ಉಸ್ತುವಾರಿ ಸುರ್ಜೇವಾಲ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಡಾ.ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದರು. ಅದರಂತೆ, ರಾಜ್ಯ ಸರ್ಕಾರ ಎಸ್‌ಸಿ/ಎಸ್‌ಟಿ ಸಮುದಾಯಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದು, ಸಂವಿಧಾನದ ಒಂಬತ್ತನೇ ಶೆಡ್ಯೂಲ್‌ಗೆ ಸೇರಿಸಲು ಶಿಫಾರಸು ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದರು.

ಬಿಜೆಪಿ ಈಗ ಜನರಿಗೆ ದ್ರೋಹ ಬಗೆದ ಪಕ್ಷವಾಗಿದೆ. 420 ಬಿಜೆಪಿ ಬೊಮ್ಮಾಯಿ ಸರ್ಕಾರದ ಮೀಸಲಾತಿ ದ್ವೇಷ, ವೈಷಮ್ಯ ಮತ್ತು ಘರ್ಷಣೆಯನ್ನು ಸೃಷ್ಟಿಸುವ ಕುಶಲ ರಾಜಕೀಯವನ್ನು ಮತ್ತಷ್ಟು ಸ್ಪಷ್ಟಪಡಿಸುತ್ತದೆ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದರು. 

ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಏನನ್ನೂ ಮಾಡಿಲ್ಲ ಮತ್ತು ಅವರನ್ನು ಮತ ಬ್ಯಾಂಕ್‌ಗಾಗಿ ಬಳಸಿಕೊಂಡಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ನಾಲ್ಕು ವರ್ಷಗಳ ಹಿಂದೆ ಸಲ್ಲಿಸಲಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಬಿಎಸ್ ಯಡಿಯೂರಪ್ಪ ಸರ್ಕಾರ ಆಯೋಗದ ಅವಧಿಯನ್ನು ಆರು ತಿಂಗಳು ವಿಸ್ತರಿಸಿದೆ ಎಂಬುದು ಸತ್ಯ ಎಂದು ಮುಖ್ಯಮಂತ್ರಿ ತಿಳಿಸಿದರು.

"ತಮ್ಮ ಆಡಳಿತಾವಧಿಯಲ್ಲಿ ಸರ್ವಪಕ್ಷ ಸಭೆ ಕರೆದು ಒಪ್ಪಿಗೆ ನೀಡಲಾಯಿತು. ನಂತರ ರಾಜ್ಯ ಸಚಿವ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯಗಳ ಪರವಾಗಿ ನಿರ್ಣಯ ಕೈಗೊಳ್ಳಲಾಯಿತು. ಶೆಡ್ಯೂಲ್‌ 9 ಸೇರ್ಪಡೆ ಶಿಫಾರಸ್ಸನ್ನೂ ಮಾಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.