ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು, ಕೆಲವೊಮ್ಮೆ ಐಟಿ-ಇಡಿ..: ಕಿಚ್ಚ ಸುದೀಪ್ ಬಗ್ಗೆ ಕಾಂಗ್ರೆಸ್
ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು...

ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜಕೀಯ ಬೆಂಬಲ ನೀಡುವುದಾಗಿ ಬುಧವಾರ ಹೇಳಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಪಕ್ಷ ಕಾಂಗ್ರೆಸ್, ಚಿತ್ರನಟರು ಯಾರನ್ನು ಬೇಕಾದರೂ ಬೆಂಬಲಿಸಲು ಸ್ವತಂತ್ರರು. ಆದರೆ ಕೆಲವೊಮ್ಮೆ ಐಟಿ-ಇಡಿ ಅಥವಾ ಇತರೆ ಸಂಗತಿಗಳು ಇದರ ಹಿಂದೆ ಕೆಲಸ ಮಾಡುತ್ತವೆ ಎಂದು ವ್ಯಂಗ್ಯವಾಡಿದೆ.
ಚಿತ್ರನಟರು ಯಾರನ್ನು ಬೆಂಬಲಿಸಬೇಕೆಂದು ಆಯ್ಕೆ ಮಾಡಿಕೊಳ್ಳಲು ಅವರು ಸ್ವತಂತ್ರರು. ಆದರೆ, ಕೆಲವೊಮ್ಮೆಐಟಿ, ಇಡಿ ಅಥವಾ ಬೇರೆ ಕಾರಣಗಳು ಇರುತ್ತವೆ. ಕರ್ನಾಟಕದಲ್ಲಿ ಬಿಜೆಪಿಯ ದಿವಾಳಿತನ ಸ್ಪಷ್ಟವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಅವರು ಟ್ವೀಟ್ ಮಾಡಿದ್ದಾರೆ.
ಈಗ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರ ಮಾತುಗಳನ್ನು ಕೇಳಲು ಯಾರೂ ಸುಳಿಯದ ಕಾರಣ ಅವರು ಈಗ ಪ್ರೇಕ್ಷಕರನ್ನು ಸೆಳೆಯಲು ಚಲನಚಿತ್ರ ತಾರೆಯರನ್ನು ಅವಲಂಬಿಸಿದ್ದಾರೆ. ಆದರೆ ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವವರು ಸಿನಿಮಾ ತಾರೆಯರಲ್ಲ ಎಂದು ಸುರ್ಜೇವಾಲ ಅವರು ಟಾಂಗ್ ನೀಡಿದ್ದಾರೆ.
ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಬೊಮ್ಮಾಯಿ, ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


